ಪಾಟ್ನಾ: ಹಲವು ರಾಜ್ಯಗಳು ಬಿಜೆಪಿ ವಿರುದ್ಧ ತಿರುಗಿ ಬಿದ್ದಿವೆ. ಹೇಗಾದರೂ ಬಿಜೆಪಿಯನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿವೆ. ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗ ಬಿಜೆಪಿ ಸೋಲಿಸುವ ಯೋಜನೆ ಹಾಕಿಕೊಂಡಿದ್ದಾರೆ. ಅದು ಪಾಟ್ನಾದಿಂದಾನೆ ಶುರುವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಂದು ಮಹತ್ವದ ಸಭೆ ನಡೆದಿದೆ.
ಸಭೆ ಬಳಿಕ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ನಾವೂ ಒಗ್ಗಟ್ಟಾಗಿದ್ದೇವೆ. ಒಗ್ಗಟ್ಟಿನ ಹೋರಾಟ ಮಾಡೋಣಾ. ಪಾಟ್ನಾದಿಂದಾನೇ ಹೊಸ ಇತಿಹಾಸ ಆರಂಭವಾಗಲಿದೆ. ಬಿಹಾರದಿಂದಾನೇ ಇತಿಹಾಸ ರಕ್ಷಿಸೋದು ನಮ್ಮ ಬಯಕೆಯಾಗಿದೆ. ಫ್ಯಾಸಿಸ್ಟ್ ಸರ್ಕಾರದ ವಿರುದ್ಧ ಮಾತನಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲು ವಿಪಕ್ಷಗಳು ನಿರ್ಧಾರ ಮಾಡಿವೆ. ನಮ್ಮ ನಮ್ಮ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬ ಬಗ್ಗೆ ಅಜೆಂಡಾ ಸಿದ್ಧಪಡಿಸುತ್ತೇವೆ. ಜುಲೈನಲ್ಲಿ ನಾವು ಶಿಮ್ಲಾದಲ್ಲಿ ಮತ್ತೆ ಸಭೆ ಸೇರುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.