ಸುದ್ದಿಒನ್, ಚಿತ್ರದುರ್ಗ, (ಜೂ.26) :ದಿವಂಗತ ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶ ನೀಡುವುದಿಲ್ಲವೆಂದು ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಹೆಚ್. ಹನುಮಂತಪ್ಪ ತಿಳಿಸಿದ್ದಾರೆ.
ಈ ವಿಚಾರವಾಗಿ ಪ್ರಕಟಣೆಯನ್ನು ನೀಡಿದ್ದು, ತಿಳುವಳಿಕೆ ಪತ್ರ (ಸೂಚನಾ ಪತ್ರ) ದಲ್ಲಿ,
ದುರದೃಷ್ಟವಶಾತ್ ಶ್ರೀ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ ದಾಖಲಾಗಿರುವ ಆರೋಪಗಳ ವಿಚಾರಣೆ ನಡೆಯುತ್ತಿದ್ದು, ಶ್ರೀಮಠದ ಅನುಯಾಯಿಗಳು, ಭಕ್ತರುಗಳಲ್ಲಿ ಎರಡು ಮೂರು ಗುಂಪುಗಳಾಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಕೋರ್ಟುಗಳಲ್ಲಿ ಕೇಸುಗಳನ್ನು ಹಾಕಿದ್ದು, ಇಂತಹ ವಾತಾವರಣದಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ಪರಸ್ಪರ ದೋಷಾರೋಪಣೆ ಗೊಂದಲಗಳು ಉಂಟಾಗಿದ್ದು, ವಾತಾವರಣ ಬಿಸಿಯಾಗಿ ಬಿಗುವುನಿಂದ ಕೊಡಿದ್ದಾಗಿರುವುದರಿಂದ ಈ ಸಂಬಂಧದ ಯಾವುದೇ ಸಭೆಗಳನ್ನು ದಿವಂಗತ ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ನಡೆಸಲು ಅವಕಾಶ ನೀಡುವುದಿಲ್ಲವಾಗಿ ಈ ಮೂಲಕ ಸೂಚಿಸಲಾಗಿರುತ್ತದೆ. ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












