Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನಗೂ ಫ್ರೀ, ನಿನಗೂ ಫ್ರೀ ಎಂದಿದ್ದ ಸರ್ಕಾರಕ್ಕೆ ಮಾರುಕಟ್ಟೆ ಬೆಲೆ ನಿಯಂತ್ರಣ ಮಾಡುವುದಕ್ಕೆ ಆಗಲ್ವಾ : ಕುಮಾರಸ್ವಾಮಿ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಇದ್ದಕ್ಕಿದ್ದ ಹಾಗೇ ಮಾರುಕಟ್ಟೆಯಲ್ಲಿ ಬೆಲೆ ಎಲ್ಲಾ ಏರಿಕೆಯಾಗಿದೆ. ತರಕಾರಿಯನ್ನು ಮುಟ್ಟುವುದಕ್ಕೂ ಆಗುತ್ತಿಲ್ಲ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

* ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು

1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!
2.ಗೃಹಜ್ಯೋತಿ ಈಗ ಸುಡುಜ್ಯೋತಿ!!
3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!!
4.ಗೃಹಲಕ್ಷ್ಮಿಗೆ ಗ್ರಹಣ!!!!
5.ನಿದಿರೆಗೆ ಜಾರಿದೆ ಯುವನಿಧಿ!!!!

5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ @INCKarnataka ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.

ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ.

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ.

ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ ₹20 ಏರಿದ್ದರೆ,ಕೆಜಿ ಟೊಮ್ಯಾಟೋ ಬೆಲೆ ₹100 ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ.

ರಾಜ್ಯ @INCKarnataka ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲಾ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ?

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ?

@INCKarnataka ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

ಸೆಡೆಗಳು ಎಂದಿದ್ದ ರಜತ್ ಗೆ ಬೆವರಿಳಿಸಿದ ಬಾದ್ ಶಾ..!

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ರಜತ್ ಹಾಗೂ ಶೋಭಾ ಶೆಟ್ಟಿ ಬಂದಿದ್ದಾರೆ. ರಜತ್ ಆರಂಭದಿಂದಾನು ಒಳ್ಳೆ ರೌಡಿಸಂ ತೋರಿಸುವ ರೀತಿಯೇ ಆಟವಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರಬೇಕು

ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ : ಪ್ರೊ.ಹೆಚ್.ಎ.ಭಿಕ್ಷಾವರ್ತಿಮಠ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ. ಕೇವಲ ಪದವಿ ಪಡೆದರೆ ಸಾಲದು. ಶಿಕ್ಷಣದ

error: Content is protected !!