ಬೆಂಗಳೂರು: ಆತ್ಮಾವಲೋಕನ ಸಭೆಗಳು ನಡೆಯುತ್ತಿರುವುದು ನೋಡಿದರೆ ಬಿಜೆಪಿ ಪಕ್ಷವೇ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವವಿದೆ. ಪಕ್ಷದೊಳಗಿನ ಆಂತರಿಕ ಕಲಹವನ್ನು ನಿಭಾಯಿಸಲಾಗದ @nalinkateel ಅವರದ್ದು ಅಸಾಮರ್ಥ್ಯ ಎಂಬುದನ್ನು ಒಪ್ಪಿಕೊಳ್ಳುವ ಧೈರ್ಯವಿದೆಯೇ @BJP4Karnataka?. ಬಿಜೆಪಿಯಲ್ಲಿ ಎಲ್ಲರೂ ಸದಾ ಚೂರಿ ಹಿಡಿದುಕೊಂಡೇ ಓಡಾಡುತ್ತಿರುವಂತಿದೆ, ಪರಸ್ಪರ ಬೆನ್ನಿಗೆ ಚೂರಿ ಹಾಕಿಕೊಳ್ಳಲು ಎಂದು ಟ್ವೀಟ್ ಮಾಡಿದೆ.
ಬಾಂಬೆ ಟೀಮ್ ಈಗ ಬಿಜೆಪಿಯಲ್ಲಿ ಅನಾಥರ ಟೀಮ್ ಆಗಿದೆ! “ವಲಸಿಗ vs ಮೂಲ” ಎಂಬ ಒಳಬೇಗುದಿಗೆ ಈಶ್ವರಪ್ಪ ತುಪ್ಪ ಸುರಿದಿದ್ದಾರೆ, ವಲಸೆ ಬಂದವರಿಂದಲೇ ಶಿಸ್ತು ಮಾಯವಾಗಿದೆ ಎಂಬ ಹೇಳಿಕೆಯನ್ನು ಒಪ್ಪಿಕೊಳ್ಳುತ್ತೀರಾ ಅಥವಾ ಈಶ್ವರಪ್ಪರನ್ನೇ ಬಾಯಿ ಮುಚ್ಚಿಸುತ್ತೀರಾ @BJP4Karnataka?. ನಾಯಕನಿಲ್ಲದ ಬಿಜೆಪಿ, ನಾವಿಕನಿಲ್ಲದ ಹಡಗಿನಂತಾಗಿ ಮುಳುಗಿದೆ, ನೆಲ ಕಚ್ಚುವುದೊಂದೇ ಬಾಕಿ!
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಕುರ್ಚಿಯ ಮೇಲೆ ಹತ್ತಾರು ಟವೆಲ್ ಗಳು ಬಿದ್ದಿವೆ! ಹುದ್ದೆಯ ಆಸೆಗಾಗಿಯೇ ಪರಸ್ಪರ ಹೊಂದಾಣಿಕೆ ರಾಜಕೀಯದ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ದಲಿತರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಕೂಗೆದ್ದಿದೆ, ಆದರೆ ಇದು ವಿಫಲ ಕೂಗು, ಬಿಜೆಪಿಯ ಗರ್ಭಗುಡಿಗೆ ದಲಿತರಿಗೆ ಪ್ರವೇಶವಿಲ್ಲ. ದಲಿತರಿಗೆ ಉನ್ನತ ಸ್ಥಾನ ನೀಡಿ @BJP4Karnataka ತನ್ನ ದಲಿತವಿರೋಧಿ ಕೃತ್ಯಗಳಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ!
ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ
ಸಂತೋಷ ಕೂಟ ಹಾಗೂ BSY ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ! ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ @BJP4Karnataka? ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ!? ಎಂದು ಟ್ವೀಟ್ ಮಾಡಿದ್ದಾರೆ.