ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ, ಭೀಮಸಮುದ್ರ,
ಮೊ : 98808 36505
ಚಿತ್ರದುರ್ಗ, (ಜೂ.28) : ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿಗಳಲ್ಲಿ ಯಾವುವು ಸರಿಯಾಗಿ ಜನರ ತಲುಪುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹೇಳಿದಂತೆ ನಡೆದುಕೊಳ್ಳುತ್ತಿಲ್ಲ. 200 ಯೂನಿಟ್ ಫ್ರೀ, ಬಸ್ ಪಾಸ್ ಉಚಿತ , 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಹೇಳಿದ್ದರು. ಆದರೆ ಇವರು ಯಾವುದನ್ನು ಮಾಡದೇ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಜನರಿಗೆ ಕೈಗಾರಿಕೆ, ನೀರಾವರಿ ಸೌಲಭ್ಯ ಕೊಟ್ಟರೆ ಜನ ಯಾವ ಗ್ಯಾರಂಟಿ ಕೇಳುವುದಿಲ್ಲ ಎಂದು ಬಿಜೆಪಿ ಮುಖಂಡ ಜಿ.ಎಸ್. ಅನಿತ್ ಕುಮಾರ್ ಹೇಳಿದರು.
ಅವರು ತಾಲ್ಲೂಕಿನ ಭೀಮಸಮುದ್ರದಲ್ಲಿ ಮಂಗಳವಾರ, ಪ್ರಧಾನಿನರೇಂದ್ರ ಮೋದಿಯವರ ಮೇರಾ ಬೂತ್ ಸಬ್ಸೇ ಮಜ್ಬೂತ್ ಕಾರ್ಯಕ್ರಮ ವೀಕ್ಷಣೆ ಮಾಡಿ, ನಂತರ ಮಾತನಾಡಿದರು.
ಮೋದಿಯವರು ವಿದೇಶಕ್ಕೆ ಹೋದಾಗ ಅಲ್ಲಿಯ ಜನರಯ ಚಪ್ಪಾಳೆ ತಟ್ಟಿ ಭಾರತ ದೇಶದ ಜನರಿಗೆ ಗೌರವ ತೋರುತ್ತಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಬಿಜೆಪಿ ಬೂತ್ ಮಟ್ಟದಲ್ಲಿ ಉತ್ತಮ ಕೆಲಸ ಮಾಡಬೇಕೆಂದು ಮೋದಿಯವರು ತಿಳಿಸಿದ್ದಾರೆ ಎಂದರು.
ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸದಸ್ಯರು ,ರಾಷ್ಟೀಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟೀಯ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಕೆ. ಲಕ್ಷ್ಮಣ್ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರವು ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸುವುದಿಲ್ಲ. ಸುಳ್ಳು ಭರವಸೆಗಳನ್ನು ನೀಡಿ ಜನರ ದಾರಿ ತಪ್ಪಿಸುತ್ತಿದೆ. ರಾಜಸ್ಥಾನ ಕಾಂಗ್ರೆಸ್ ಸರ್ಕಾರ ನೀಡಿದ ರೈತರ ಸಾಲ ಮನ್ನಾ 4 ವರ್ಷಗಳಾದರೂ ಈಡೇರಿಸಿಲ್ಲ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಹಿಂದುಳಿದ ವರ್ಗದವರನ್ನು ಕಡೆಗಣಿಸಿದೆ. ಕೇಂದ್ರ ಸರ್ಕಾರವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿ ಜನರ ಪರವಾದ ಕೆಲಸ ಮಾಡುತ್ತಿದೆ. ಮುಂದಿನ ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಳಲ್ಲಿ ನಾವು ಅತ್ಯಧಿಕ ಸ್ಥಾನಗಳನ್ನು ಗಳಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎ. ಮುರುಳಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಎಸ್ ಕಲ್ಲೇಶಯ್ಯ, ಟಿ.ಜಿ.ಅರುಣ್ ಕುಮಾರ್,ಟಿ.ಜಿ. ಮಲ್ಲಿಕಾರ್ಜುನ, ಎ.ಎಸ್. ಗುರುಮೂರ್ತಿ, ಮಾಜಿ ಎಪಿಎಂಸಿ ಅಧ್ಯಕ್ಷ, ಗ್ರಾಮ ಪಂಚಾಯತಿ ಸದಸ್ಯ ಟಿ ಜಿ ಅಶೋಕ್, ಶಿವಕುಮಾರ್, ವೀರೇಶ್ ಜಿ. ದರ್ಶನ್, ಕೆ.ಎಸ್. ತಿಮ್ಮೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.