ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ
ಸುದ್ದಿಒನ್, ದಾವಣಗೆರೆ, ಜೂನ್.30 :: ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ದಾವಣಗೆರೆ ವಲಯ ಹೆಬ್ಬಾಳು ಶಾಖೆಯ ಆನಗೋಡು ಗಸ್ತಿನಲ್ಲಿ ಜೂನ್ 26 ರಂದು ಹೆಬ್ಬಾಳು ಶಾಖೆಯ ಸಿಬ್ಬಂದಿಯವರು ರಾತ್ರಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಟಾವಣೆ ಮಾಡುತ್ತಿದ್ದ ಆರೋಪಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್ ಜಗನ್ನಾಥ ಹಾಗೂ ತಂಡದವರು ಬಂಧಿಸಲಾಗಿದೆ.
ಒಬ್ಬ ಆರೋಪಿಯನ್ನು ಬಂಧಿಸಿ ಅಂದಾಜು ರೂ. 1 ಲಕ್ಷ ಮೌಲ್ಯದ 15 ಕೆ.ಜಿ ಶ್ರೀಗಂಧವನ್ನು ಜಪ್ತು ಪಡಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಹಾಗೂ ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿರುತ್ತದೆ. ನಿಮ್ಮ ಹತ್ತಿರದ ಅರಣ್ಯ ಪ್ರದೇಶಗಳ ಸುತ್ತಮುತ್ತ ವನ್ಯಜೀವಿ, ಅರಣ್ಯ ಸಂಪತ್ತಿಗೆ ಮಾರಕವಾಗುವಂತಹ ಕಾರ್ಯಚಟುವಟಿಕೆಗಳು ಕಂಡುಬಂದಲ್ಲಿ ಇಲಾಖೆ ಉಚಿತ ಸಹಾಯವಾಣಿ 1926ಗೆ ಕರೆ ಮಾಡಲು ಕೋರಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















