ಬೆಂಗಳೂರು: ಮಾಜಿ ಸಚಿವ ಡಾ.ಕೆ ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ತಮ್ಮ ವಿರುದ್ಧ ಅವಮಾನಕರ ಹೇಳಿಕೆ ನೀಡುತ್ತಾರೆ ಎಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಮ್ಯಾಜಿಸ್ಟ್ರೇಟ್ ಕೋರ್ಟ್ ಜುಲೈ 4ರಂದು ಅರ್ಜಿ ವಿಚಾರಣೆ ನಡೆಸಲಿದೆ. ಪ್ರದೀಪ್ ಈಶ್ವರ್ ನೇರಾ ನೇರವಾಗಿ ಮಾಜಿ ಸಚಿವ ಸುಧಾಕರ್ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದರು. ಆರೋಗ್ಯ ಸಚಿವರಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಹಿನ್ನೆಲೆ ಮಾಜಿ ಸಚಿವರು ಸದ್ಯ ತಮ್ಮ ವಕೀಲರ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಮಾತಿನ ಮೂಲವೇ ಸಾಕಷ್ಟು ಸುದ್ದಿ ಮಾಡಿದ್ದರು. ಚುನಾವಣೆಯ ಸಂದರ್ಭದಲ್ಲೂ ಪ್ರದೀಪ್ ಅವರ ಮಾತುಗಳು ಮತದಾರರ ಮೇಲೆ ಭಾರೀ ಪ್ರಮಾಣ ಪ್ರಭಾವ ಬೀರಿದ್ದರು. ಅಲ್ಲದೇ ಚುನಾವಣೆಯಲ್ಲಿ ಪ್ರಭಾವಿ ಸಚಿವ ವಿರುದ್ಧವೇ ಗೆದ್ದಿದ್ದಾರೆ. ಆದರೆ ಗೆದ್ದ ಬಳಿಕವೂ ಅವರ ಮಾತುಗಾರಿಕೆ ಮುಂದುವರೆದಿದೆ.