ಮೈಸೂರು: ಸರ್ಕಾರಿ ನೌಕರಿ ಹುದ್ದೆಗಳಿಗೆ ಯಾವಾಗ ಅರ್ಜಿ ಆಹ್ವಾನ ಮಾಡುತ್ತಾರೆ ಅಂತ ಕೆಲ ವರ್ಷಗಳಿಂದ ಅಭ್ಯರ್ಥಿಗಳು ಓದುತ್ತಾ, ಕಾಯುತ್ತಾ ಕೂತಿದ್ದರು. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ ಎಂಬುದನ್ನು ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಕಾಸ್ಟೇಬಲ್, 400 ಪಿಎಸ್‌ಐ ಹುದ್ದೆಗಳು ಖಾಲಿ ಇದೆ. ಶೀಘ್ರವೇ ಭರ್ತಿ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ.
ಇನ್ನು ಇದೇ ವೇಳೆ ಹತ್ತು ಕೆಜಿ ಅಕ್ಕಿಯ ಬಗ್ಗೆ ಮಾತನಾಡಿ, ಜುಲೈ 1 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗುತ್ತದೆ. ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡುತ್ತೇವೆ ಅಂತಾ ಹೇಳಿದ್ದೆವು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಹೇಳಿಲ್ಲ. ಈ ತಿಂಗಳಿನಿಂದಲೇ ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದರು.