ಸುದ್ದಿಒನ್ ಚಿತ್ರದುರ್ಗ, (ಜು.03) : ಜಿಲ್ಲೆಯ ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಹಠಾತ್ ಮರಣ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.