ಸುದ್ದಿಒನ್, ಚಿತ್ರದುರ್ಗ,(ಜು.03) : ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಚಿತ್ರದುರ್ಗ : ಮಲ್ಲಾಪುರ ಗೊಲ್ಲರಹಟ್ಟಿ ಬಳಿ ಭೀಕರ ರಸ್ತೆ ಅಪಘಾತ : ಟ್ರಕ್ ಪಲ್ಟಿ ಓರ್ವ ಸಾವು pic.twitter.com/RG5eMggfdG
— suddione-kannada News (@suddione) July 3, 2023
ಹೊಸ ವರ್ತುಲ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ಮೂಲದ ಟ್ರಕ್ ಫ್ಲೈಓವರ್ ನಿಂದ ಹೊಸಪೇಟೆ ಕಡೆಗೆ ಹೋಗಲು ಸೇತುವೆ ಮೇಲಿನಿಂದ ಕೆಳಗೆ ಇಳಿಯುವಾಗ ಚಾಲಕನ ನಿಯಂತ್ರಣ ತಪ್ಪಿಪಲ್ಟಿಯಾಗಿದೆ. ಈ ವೇಳೆ ಟ್ಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಮಾತ್ರ ಟ್ರಕ್ ನಲ್ಲಿಯೇ ಸಿಲುಕಿದ್ದಾನೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಡಿ ಎಸ್ ಪಿ ಅನಿಲ್ ಕುಮಾರ್, ಇನ್ಸ್ಪೆಕ್ಟರ್ ಬಾಲಚಂದ್ರ ನಾಯಕ್ ಸೇರಿದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ವರ್ಗದವರು ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














