ಸುದ್ದಿಒನ್, ಚಿತ್ರದುರ್ಗ,(ಜುಲೈ03) : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸೋಮವಾರ ದಾವಣಗೆರೆ ವಿಭಾಗದ ಪೊಲೀಸ್ ಮಹಾ ನಿರೀಕ್ಷಕ ತ್ಯಾಗರಾಜ ಭೇಟಿ ನೀಡಿದರು.
ನಾಗರೀಕ ಬಂದೂಕು ತರಬೇತಿ ಹಾಗೂ ಮಕ್ಕಳಿಗೆ ಸಂಚಾರ ಜಾಗೃತಿ ಸೇರಿದಂತೆ ನಗರದ ನಾಗರೀಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಿದರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕುಸ್ತಿಪಟು ಸದ್ದಾಂ ಆಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ ಸೇರಿದಂತೆ ರೈಫಲ್ ಕ್ಲಬ್ ಅಧ್ಯಕ್ಷ ಅನಂತರೆಡ್ಡಿ, ಕಾರ್ಯದರ್ಶಿ ಮಹಮ್ಮದ್ ಫೈಜುಲ್ಲಾ ಪಿ, ಮಹಮ್ಮದ್ ಆಲಿ, ಮಹೇಂದ್ರನಾಥ.ವೈ.ಬಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















