Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2ನೇ ದಿನದ ವಿಧಾನಸಭಾ ಅಧಿವೇಶನ : ಬಿಜೆಪಿ ಪ್ರತಿಭಟನೆ ಬಗ್ಗೆ ಡಿಸಿಎಂ ಹೇಳಿದ್ದೇನು..?

---Advertisement---

ಬೆಂಗಳೂರು : ನಿನ್ನೆಯಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಗ್ಯಾರಂಟಿಗಳ ಜಾರಿಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಡಿಸಿಎಂ ಶಿವಕುಮಾರ್, ಅವರ ಪ್ರತಿಭಟನೆಗೆ ಶುಭವಾಗಲಿ ಎಂದಿದ್ದಾರೆ.

ಬಿಜೆಪಿಯವರು ಸದನದ ಒಳಗೆ, ಹೊರಗೆ ಪ್ರತಿಭಟನೆ ಮಾಡಲಿ. ಪ್ರತಿಭಟನೆಗೆ ಮುಂದಾಗಿರುವ ಅವರಿಗೆ ಒಳ್ಳೆಯದಾಗಲಿ. ಎರಡು ಕಡೆ ಪ್ರತಿಭಟನೆ ನಡೆಸೋದು ಒಳ್ಳೆಯದು. ಅವರ ಆಚಾರ ವಿಚಾರವನ್ನು ಅವರೇ ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಏನು ಗ್ಯಾರಂಟಿ ಕೊಟ್ಟಿದೆ, ಅದನ್ನು ಕಂಡಿಶನ್​ಯಿಲ್ಲದೇ ತರಬೇಕು, ಗೋ ಹತ್ಯೆ ಕಾಯಿದೆ ಬದಲಾವಣೆ ಮಾಡಬಾರದು, ಈ ಕುರಿತಾಗಿ ಇಂದು ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...