Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸದನದಲ್ಲಿ ಧರಣಿ ವಾಪಾಸ್ ಪಡೆದ ಬಿಜೆಪಿ

---Advertisement---

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ನಿನ್ನೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಸದನದ ಒಳಗೂ ಮತ್ತು ಹೊರಗೂ ಪ್ರತಿಭಟನೆ ನಡೆಸಿದೆ. ಐದು ಗ್ಯಾರಂಟಿಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು, ಅದಕ್ಕೆ ಅವಕಾಶ ನೀಡಬೇಕು ಎಂಬ ಒತ್ತಾಯವಿತ್ತು.

ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದರು. ಇನ್ನು ವಿಧಾನಸೌಧದ ಬಳಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ಬಿಜೆಪಿ ಪಕ್ಷ ಪ್ರತಿಭಟನೆಯನ್ನು ಕೈಬಿಟ್ಟಿದೆ.

ಬಿಜೆಪಿ ಸದನದಲ್ಲಿ ಧರಣಿ ವಾಪಾಸ್ ಪಡೆದಿದೆ. ಕಲಾಪದಲ್ಲಿ ಚರ್ಚೆಗೆ ಅವಕಾಶ ಹಿನ್ನೆಲೆ ವಾಪಸ್ ಪಡೆದುಕೊಂಡಿದೆ. ಇನ್ನು ವಿಧಾನಸಭೆ ಕಲಾಪ ಆರಂಭವಾಗಿದ್ದು, ನಿಗದಿತ ಸಮಯಕ್ಕಿಂತ ಮುಂಚೆ ಬಂದ ಶಾಸಕರಿಗೆ ಸ್ಪೀಕರ್ ಯುಟಿ ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...