ದಕ್ಷಿಣ ಕನ್ನಡ: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಮಂಗಳೂರಿನಲ್ಲಿ ಬಾರೀ ಮಳೆಯಾಗುತ್ತಿದ್ದು, ಗಾಳಿ ಸಹಿತ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
ಉಡುಪಿಯಲ್ಲಿ ಮಳೆರಾಯನಿಂದ ಕಾಲುಜಾರಿ ನದಿಗೆ ಬಿದ್ದು ಶೇಷಾದ್ರಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೀದರ್ ನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿದೆ.
ಮಂಗಳೂರಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ನದಿಗೆ ಇಳಿಯದಂತೆ ಸೂಚನೆ ನೀಡಿದ್ಸಾರೆ. ಮಂಗಳೂರು ನಗರದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಜನರಿಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಫಲಕ ಮಾತ್ರವಲ್ಲದೇ ಭಾರ ತಾಳಲಾಗದೆ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಕೂಡ ಧರಗೆ ಬಿದ್ದಿದೆ.