Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಮತ್ತೆ 50% ಡಿಸ್ಕೌಂಟ್ ನೀಡಿದ ಇಲಾಖೆ..!

---Advertisement---

 

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಕಟ್ಟುವುದಕ್ಕೆ ಎಷ್ಟೆ ಸಲ ಹೇಳಿದರು, ದಂಡ ಕಟ್ಟುವ ಉಸಾಬರಿಗೆ ಹೋಗಲ್ಲ. ಆದರೆ ಕಳೆದ ಬಾರಿ 50% ಡಿಸ್ಕೌಂಟ್ ನೀಡಲಾಗಿತ್ತು. ಅದು ಲಿಮಿಟೇಷನ್ ಇತ್ತು ಸಮಯ. ಹೀಗಾಗಿ ಸಾಕಷ್ಟು ಕಟ್ಟೋದಕ್ಕೆ ಆಗಲಿಲ್ಲ. ಇದೀಗ ಮತ್ತೆ ಆ ಆಫರ್ ಬಂದಿದೆ.

50% ದಂಡ ಪಾವತಿ‌ಮಾಡುವುದಕ್ಕೆ ಅವಕಾಶ ನೀಡಿದ್ದು, ಫೆಬ್ರವರಿ 11ರ 2023ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಆದೇಶ ನೀಡಲಾಗಿದೆ. ಇನ್ನು ಈ ರಿಯಾಯಿತಿಯನ್ನು ಸೆಪ್ಟೆಂಬರ್ 9ರವರೆಗೆ ಅವಕಾಶ ನೀಡಲಾಗಿದೆ.

ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...