Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ, ಎದೆ ಎತ್ತಿ ಉತ್ತರಿಸಿ :  ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

* ಯಾವ ಭರವಸೆಗಳನ್ನೂ ಈಡೇರಿಸದ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ: ತಕ್ಕ ಉತ್ತರ ಕೊಡಿ

* ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸೂಚನೆ ನೀಡಿದ ಸಿಎಂ

ಬೆಂಗಳೂರು, ಜು 07: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.

ಸಂಪುಟ ಸಭೆಗೂ ಮುನ್ನ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದರು.

ನಾವು 2013 ಚುನಾವಣೆ ವೇಳೆ ನೋಡಿದ್ದ ಭರವಸೆಗಳನ್ನು ಸರ್ಕಾರ ನಡೆಸಿದ ಐದು ವರ್ಷಗಳಲ್ಲಿ ಈಡೇರಿಸಿ “ನುಡಿದಂತೆ ನಡೆದ ಸರ್ಕಾರ” ಎನ್ನುವ ಹೆಗ್ಗಳಿಕೆ ಗಳಿಸಿದ್ದೇವೆ. ಬಿಜೆಪಿ 2018 ರ ಚುನಾವಣೆ ವೇಳೆ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ 608 ಭರವಸೆಗಳಲ್ಲಿ ಶೇ 95 ರಷ್ಟನ್ನು ಈಡೇರಿಸಲೇ ಇಲ್ಲ. ಹೀಗಾಗಿ ಬಿಜೆಪಿಗೆ ನಮ್ಮ ಕಡೆ ಬೊಟ್ಟು ಮಾಡುವ ನೈತಿಕತೆಯೇ ಇಲ್ಲ. ಹೀಗಾಗಿ ಅಧಿವೇಶನದಲ್ಲಿ ಸುಳ್ಳುಗಳಿಗೆ ಅವರು ಜೋತು ಬೀಳುತ್ತಾರೆ. ನೀವು ಸರಿಯಾಗಿ ಖಚಿತವಾದ ಧ್ವನಿಯಲ್ಲಿ ಸತ್ಯವನ್ನು ಮಾತನಾಡಿ ಎಂದು ತಿಳಿಸಿದರು.

2023ರ ಚುನಾವಣೆ ವೇಳೆ ನಾವು ನೀಡಿದ್ದ ಐದು ಗ್ಯಾರಂಟಿಗಳನ್ನೂ ನಾವು ಈಡೇರಿಸಲು ಶುರು ಮಾಡಿದ್ದೇವೆ. ಕೋಟಿಗಟ್ಟಲೆ ಕನ್ನಡಿಗರು ಈಗಾಗಲೇ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೂ ಅರ್ಜಿ ಸಲ್ಲಿಸಿ ಫಲಾನುಭವಿಗಳಾಗುತ್ತಿದ್ದಾರೆ. ಇದನ್ನು ನಾವು ಸ್ವಾಗತಿಸಬೇಕು.  ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರು ತಲೆ ಎತ್ತಿ ಹೆಮ್ಮೆ ಪಡುವ ಸಂದರ್ಭವನ್ನು ನಮ್ಮ ಸರ್ಕಾರ ಸೃಷ್ಟಿಸಿದೆ ಎಂದರು.

ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಮತ್ತು ಆಯವ್ಯಯ ಮಂಡಿಸುವುದು ಈ ಬಾರಿ ಸವಾಲಿನದ್ದಾಗಿತ್ತು. ಹೀಗಾಗಿ ನಾನು ಸರಣಿ ಸಭೆಗಳನ್ನು ಅಧಿಕಾರಿಗಳ ಜತೆ ನಡೆಸುತ್ತಿದ್ದೆ. ಈ ಸಂದರ್ಭದಲ್ಲಿ ಶಾಸಕರುಗಳಿಗೆ ಹೆಚ್ಚಿನ ಸಮಯ ಕೊಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

ಈ ಅಧಿವೇಶನವನ್ನು ಹಳಬರು ಮತ್ತು ನೂತನ ಶಾಸಕರು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ವಿಷಯ ತಜ್ಞರಾಗಿ, ಅಧ್ಯಯನಶೀಲರಾಗಿ ಸಕಲ ಸಿದ್ದತೆಗಳೊಂದಿಗೆ ಬಂದು ಬಿಜೆಪಿಯವರ ಸುಳ್ಳುಗಳಿಗೆ, ಜೆಡಿಎಸ್ ನವರ ಡ್ರಾಮಾಗಳಿಗೆ ಅರ್ಥಪೂರ್ಣವಾಗಿ ಉತ್ತರಿಸಿ ಎಂದು ಸಲಹೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಎಲ್ಲಾ ಸಚಿವರು ಮತ್ತು ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!