Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇದು ಕಟ್ ಅಂಡ್ ಪೇಸ್ಟ್ ಬಜೆಟ್ : ಕುಮಾರಸ್ವಾಮಿ ವ್ಯಂಗ್ಯ

---Advertisement---

 

 

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು 2023-24ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಟ್ ಅಂಡ್ ಪೇಸ್ಟ್ ಬಜೆಟ್ ಎಂದು ವ್ಯಂಗ್ಯವಾಡಿದ್ದಾರೆ.

ಕೇಂದ್ರ ಸರ್ಕಾರದ ಹಾಗೂ ಹಿಂದಿ‌ನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಮೀಸಲಾದ ಬಜೆಟ್ ಆಗಿದೆ. ನಮ್ಮ ಹಣಕಾಸು ಸಚಿವರು ದಾಖಲೆ ನಿರ್ಮಿಸಿಕೊಳ್ಳಲು ಮಂಡಿಸಿರುವಂತ ಬಜೆಟ್ ಇದಾಗಿದೆ. ಇದನ್ನು ರಾಜ್ಯ ಬಜೆಟ್ ಪುಸ್ತಕ ಎನ್ನುವುದಕ್ಕಿಂತ ಬಿಜೆಪಿಯನ್ನು ನಿಂದಿಸುವುದಕ್ಕೆ ಸಿದ್ಧವಾದ ಬಜೆಟ್ ಎನ್ನಬಹುದು.

ಈ ಬಾರಿ 3 ಲಕ್ಷ 28 ಸಾವಿರ ಕೋಟಿ ಬಜೆಟ್ ನಲ್ಲಿ ಎರಡೂವರೆ ಲಕ್ಷ ಕೋಟಿ ರೆವಿನ್ಯೂ ಎಕ್ಸ್ ಪೆಂಡಿಚರ್, 27 ಸಾವಿರ ಕೋಟಿ ಸಾಲ ಮರುಪಾವತಿಗೆ ಇಟ್ಟುಕೊಂಡಿದ್ದಾರೆ. ಅದಾದ ಮೇಲೆ 85 ಸಾವಿರ ಕೋಟಿ ಸಾಲ ಎತ್ತುತ್ತಾರೆ. ಆ ಸಾಲಕ್ಕೆ ತಲೆ ಕೊಡುವುದು ಯಾರು?. ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ರಾಜ್ಯದ ತೆರಿಗೆ ಇಲಾಖೆಗಳ ಯಾವುದೇ ಶ್ರಮ ಇಲ್ಲದೆ ಜನರು ರಾಜ್ಯದ ಜನತೆ ಖಜಾನೆ ತುಂಬಿದ್ದಾರೆ. ಅದಕ್ಕಾಗಿ ಜನತೆಯನ್ನು ಅಭಿನಂದಿಸುತ್ತೇನೆ. ಕೋವಿಡ್ ಸಮಸ್ಯೆಯಲ್ಲೂ, ಜನ ಹಣ ತುಂಬಿಸಿಕೊಟ್ಟಿದ್ದಾರೆ. ಒಂದೇ ವರ್ಷಕ್ಕೆ ಜನರ ಮೇಲೆ 85 ಸಾವಿರ ಕೋಟಿ ಸಾಲ ಹೊರೆ ಹೊರೆಸುತ್ತಿದ್ದಾರೆ. ಇಷ್ಟೋಂದು ಸಾಲ ಏಕೆ ಮಾಡ್ತೀದೀರಿ. ಅದಕ್ಕೆ ಕಾರಣ ಕೊಡಿ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment