ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಅವರನ್ನು ಶ್ರೀಲಂಕಾದಿಂದ ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿಫ್ಟ್ ಮಾಡಲಾಗುತ್ತಿದೆ. ಏರ್ ಲಿಫ್ಟ್ ಮೂಲಕ ಶಿಫ್ಟ್ ಮಾಡಲಾಗುತ್ತಿದೆ. ಸೋಮವಾರ ಸಂಜೆ ಅವರು ಬೆಂಗಳೂರಿಗೆ ಬರಲಿದ್ದಾರೆ. ನಂತರ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಡಾ. ದೇವಿ ಶೆಟ್ಟಿ ಅವರು, ಕಸ್ತೂರಿ ರಂಗನ್ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಇನ್ನು ಅವರ ಆರೋಗ್ಯದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ಷ್ಮ ನಿಗಾ ವಹಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
Sad to know that Indian Space Scientist Shri Kasturi Rangan has suffered an Heart attack in Sri Lanka.
I wish him speedy recovery and lead a healthy life.
— Siddaramaiah (@siddaramaiah) July 10, 2023
ಇನ್ನು ಸಿಎಂ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮಾಡಿದ್ದು, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರು ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬೇಸರವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯಯುತ ಜೀವನ ನಡೆಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.