ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಕ್ಕಿಭಾಗ್ಯ ಯೋಜನೆಗೆ ಅಕ್ಕಿ ಸಿಗದ ಕಾರಣ ಐದು ಕೆಜಿ ಅಕ್ಕಿಯ ಹಣವನ್ನು ನೇರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಅದಕ್ಕೆ ನಿನ್ನೆಯಿಂದಾನೇ ಚಾಲನೆ ಸಿಕ್ಕಿದೆ. ಆದರೆ ನಿಮ್ಮಗಳ ಖಾತೆಗೆ ಹಣ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಬಾಗಲಕೋಟೆ, ಧಾರವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾರ್ಡ್ ಹೊಂದಿರುವವರ ಖಾತೆಗಳಿಗೆ ಸರ್ಕಾರ ಈಗಾಗಲೇ ಹಣವನ್ನು ವರ್ಗಾವಣೆ ಮಾಡಿದೆ. ಮಾಮೂಲಿಯಂತೆ ಐದು ಕೆಜಿ ಅಕ್ಕಿಯನ್ನು ನೀಡಲಿದೆ. ಮುಂದಿನ ದಿನಗಳಲ್ಲಿ ಇನ್ನುಳೊದ ಜಿಲ್ಲೆಯ ಕಾರ್ಡುದಾರರಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕಷ್ಟವಾದ ಕಾರಣ ಕಾಂಗ್ರೆಸ್ ಸರ್ಕಾರ ಈ ನಿರ್ಧಾರಕ್ಕೆ ಬಂದಿತ್ತು. ಒಬ್ಬರಿಗೆ 170 ರೂಪಾಗಿ ನೀಡಲು ನಿರ್ಧಾರ ಮಾಡಿದೆ.
ಹಣ ಅಕೌಂಟ್ ಗೆ ಬಂದಿದೆಯಾ ಎಂಬುದನ್ನು ಪರಿಶೀಲಿಸಲು ವೆಬ್ಸೈಟ್ ಗೆ ಭೇಟಿ ನೀಡಬಹುದು. https://ahara.kar.nic.in/status1/status_of_dbt.aspx ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಕಾರ್ಡ್ ಹೊಂದಿರುವವರು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆಯಾದ ಹಣದ ಸ್ಥಿತಿಯನ್ನು ಪರಿಶೀಲಿಸಬಹುದು. ಇದಕ್ಕಾಗಿ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















