Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲಾಪದ ವೇಳೆ ಹಸಿವಿನ ಬಗ್ಗೆ ಮಾತನಾಡಿ ಸಿದ್ದರಾಮಯ್ಯರನ್ನ ಹೊಗಳಿದ ಪ್ರದೀಪ್ ಈಶ್ವರ್

---Advertisement---

 

ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಇಂದು ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ತಮ್ಮ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಜೊತೆಗೆ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು.

ಹಸಿವಿನ ಬೆಲೆ ಗೊತ್ತಿದ್ದವರಿಗೆ ಮಾತ್ರ ಇಂತಹ ಗ್ಯಾರಂಟಿಗಳನ್ನು ಹಾಗೂ ಅನ್ನ ಭಾಗ್ಯ ಯೋಜನೆಯನ್ನು ತರುವುದಕ್ಕೆ ಸಾಧ್ಯವಾಗುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ರಾಜ್ಯದ ಭರವಸೆಗಳಿದ್ದಂತೆ. ಹೀಗಾಗಿ ನಾನು ವಿರೋಧ ಪಕ್ಷಗಳಿಗೆ ವಿನಂತಿ‌ ಮಾಡಿಕೊಳ್ಳುತ್ತೇನೆ.

ಗ್ಯಾರಂಟಿ ಯೋಜನೆಗಳಲ್ಲಿ ಯಾರೂ ಕೂಡ ರಾಜಕೀಯ ಮಾಡಬೇಡಿ. ಇದು ಮುಖ್ಯವಾದ ಯೋಜನೆ. ಸಿದ್ರಾಮನ ಹುಂಡಿಯಲ್ಲಿ ಹುಟ್ಟಿದಂತಹ ಹುಡುಗನಿಗೆ ಹಸಿವಿನ ಬೆಲೆ ಗೊತ್ತಿತ್ತು ಎನಿಸುತ್ತದೆ. ಬಡವರ ಮಕ್ಕಳು ಬೆಳೀಬೇಕು ಕಣ್ರಯ್ಯ ಎಂದು ಯೋಜನೆಯ ಬಗ್ಗೆ ಮಾತನಾಡಿದ್ದಾರೆ.

ಇನ್ನು ಸರ್ಕಾರಿ ಆಸ್ಪತ್ರೆ ಬಗ್ಗೆ ಮಾತನಾಡಿ, ಸರ್ಕಾರಿ ಆಸ್ಪತ್ರೆ ಎಂದರೆ ನನಗೊಂದು ಭಾವುಕ. ನಾನು, ನನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದೇನೆ. ಆ ನೋವು ನನ್ನಲ್ಲಿ ಇದೆ. ಅಂದು ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ ನನ್ನ ಬ್ಯಾಡ್ ಲಕ್. ಅಪ್ಪ ಅಮ್ಮನನ್ನು ಕಳೆದುಕೊಂಡೆ. ಆ ನೋವು ನನ್ನಲ್ಲಿ ಇನ್ನೂ ಇದೆ ಎಂದು ಭಾವುಕರಾದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment