ಸಿಂಧಗಿ: ಸಿಂಧಗಿ ಉಪಚುನಾವಣಾ ಕಣ ರಂಗೇರಿದೆ. ಪ್ರಚಾರ ಕಾರ್ಯ ಜೋರಾಗಿದೆ. ಸಚಿವೆ ಶಶಿಕಲಾ ಜೊಲ್ಲೆ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ಮಹಿಳೆಯರಿಗೆ ಅರಿಶಿನ ಕುಂಕುಮ ನೀಡಿದ್ದಾರೆ. ರಮೇಶ್ ಬೂಸನೂರು ಅವ್ರಿಗೇನೆ ಮತ ಹಾಕಿ ಎಂದಿದ್ದಾರೆ.
ಸಿಂದಗಿ ಕ್ಷೇತ್ರ ಚುನಾವಣಾ ಉಸ್ತುವಾರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರತಿ ಮನೆ ಮನೆಗೂ ತೆರಳಿ ಭಾರತೀಯ ಸಂಪ್ರದಾಯದಂತೆ ಮಹಿಳೆಯರಿಗೆ ಅರಿಷಿಣ ಕುಂಕುಮ ನೀಡಿ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ನೀಡಿರುವ ಯೋಜನೆಗಳ ಬಗ್ಗೆ ತಿಳಿಸಿ, ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇದಕ್ಕೂ ಮೊದಲು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹತ್ತು ಹದಿನೈದು ವರ್ಷಗಳಿಂದ ಬಿಜೆಪಿಯ ಪಾಯ ಗಟ್ಟಿಯಾಗಿದೆ. ಅದರ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತಾಗಿದೆ.
ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿರುವ ರಮೇಶ ಬೂಸನೂರು ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಶಾಸಕರಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ವಿಧಾನಸೌಧದಲ್ಲಿ ಫೈಲ್ ಹಿಡಿದುಕೊಂಡು ಅಲೆದಾಡಿ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ನಾವು ಗೆದ್ದ ಮೇಲೆ ಜವಾಬ್ದಾರಿ ಹೆಚ್ಚಾಗುತ್ತದೆ. ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದ ಜನರ ಸೇವೆ ಮಾಡುವ ಜವಾಬ್ದಾರಿ ಇದೆ ಅಂತ ರಮೇಶ ಬೂಸನೂರು ಅವರು ಹೇಳಿದ್ದರು.
ನಮ್ಮ ಪಕ್ಷ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡುತ್ತದೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾನ್ಯ ಕಾರ್ಯಕರ್ತರಾಗಿದ್ದರು ಅವರು ಚಹಾ ಮಾರಿ, ಪಕ್ಷದ ಪೋಸ್ಟರ್ ಹಚ್ಚಿ ಈಗ ದೇಶದ ಪ್ರಧಾನಿ ಆಗಿದ್ದಾರೆ. ಈ ದೇಶದಲ್ಲಿ ಕಾರ್ಯಕರ್ತರಿಗೆ ಮಾನ್ಯತೆ ನೀಡುವ ಏಕೈಕ ಪಕ್ಷ ಅಂದರೆ ಅದು ಭಾರತೀಯ ಜನತಾ ಪಕ್ಷ ಎಂದು ಸಚಿವರು ಹೇಳಿದರು.
ನಮ್ಮ ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದೆ. ಈ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು,ಈ ಚುನಾವಣೆಯಲ್ಲಿ ರಮೇಶ ಬೂಸನೂರು ಶಾಸಕರಾಗಿ ಆಯ್ಕಾಯಾದ ಮೇಲೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನಾನೇ ಇಲ್ಲಿಗೆ ಬಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಕೊರೊನಾ ಮೊದಲ ಮತ್ತು ಎರಡನೇ ಸಂದರ್ಭದಲ್ಲಿ ಜನರು ಸಾಕಷ್ಟು ತೊಂದರೆಗೆ ಒಳಗಾಗಿದ್ದರು. ಆ ಸಂದರ್ಭದಲ್ಲಿ ನಾನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪ್ರವಾಸ ಮಾಡಿ, ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಪ್ರಮಾಣೀಕ ಪ್ರಯತ್ನ ಮಾಡಿದ್ದೇನೆ. ವಿಶೇಷವಾಗಿ ಆಕ್ಸಿಜನ್ ಕೊರತೆ ಸಾಕಷ್ಟು ಕಾಡಿತ್ತು. ಅದನ್ನು ಪರಿಹರಿಸುವ ಕೆಲಸ ಮಾಡಿದ್ದೇನೆ.
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಭೀಮಾ ಏತ ನೀರಾವರಿ ಯೋಜನೆಯಿಂದ ಬಾಧಿತರಾಗಿದ್ದ ಸಿಂಧಗಿ ತಾಲೂಕಿನ ಬ್ಯಾಡಗಿಹಾಳ ಮತ್ತು ತಾರಾಪುರ ಗ್ರಾಮದ 358 ಜನರಿಗೆ ಪುನರ್ ವಸತಿ ಕಾರ್ಯ ಕೈಗೊಳ್ಳಲಾಗಿದ್ದು, ಸ್ವತಃ ನಾನೇ ಎಲ್ಲರಿಗೂ ಹಕ್ಕು ಪತ್ರ ವಿತರಣೆ ಮಾಡಿದ್ದೇನೆ ಎಂದು ಸಚಿವರು ಹೇಳಿದರು.