ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಉಚಿತ ಯೋಜನೆಗಳು ಸಿಗುತ್ತಿವೆ. ಈ ಗ್ಯಾರಂಟಿಗಳ ಬಗ್ಗೆ ಅಂದಿನಿಂದಾನು ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಇಂದು ಸದನದಲ್ಲಿಯೂ ವಿರೋಧ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕ ಆರ್ ಅಶೋಕ್ ಮಾತನಾಡಿ, ಉಚಿತ ಬಸ್ ಕೊಡಿ ಎಂದು ಜನರು ಕೇಳಿರಲಿಲ್ಲ. ಈಗಾಗಲೇ ಟೊಮ್ಯಾಟೋ ಸೇರಿ ಹಲವು ವಸ್ತುಗಳು ಬೆಲೆ ಏರಿಕೆಯಾಗಿದೆ. ಈಗ ಸರ್ಕಾರ ಹಾಲಿನ ದರ ಏರಿಕೆ ಮಾಡಲು ಹೊರಟಿದೆ. ಸರ್ಕಾರದ 5 ಗ್ಯಾರಂಟಿ ನೀಡಿ ಎರಡು ಕೈಗಳಿಂದ ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಇದೇ ವೇಳೆ ಶಾಸಕ ಬಿವೈ ವಿಜಯೇಂದ್ರ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಮಳೆಯಾಗಿಲ್ಲ, ಬರಗಾಲ ಎದುರಾಗಿದೆ. ಮಲೆನಾಡು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸಿಎಂ ಗ್ಯಾರಂಟಿ ಕಾರ್ಡ್ ತೋರಿಸಿ ತಮ್ಮ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ.
ಬರಗಾಲದ ಬಗ್ಗೆ ಸದನದಲ್ಲಿ ಯಾವುದೇ ಚರ್ಚೆ ನಡೆಯುತ್ತಿಲ್ಲ. ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡುವ ಕೆಲಸ ಮಾತ್ರ ನಡೀತಿದೆ. ಗ್ಯಾರಂಟಿ ಕಾರ್ಡ್ ನಿಂದ ಜನರಿಗೆ ಯಾವುದೇ ಪ್ರಯೋಜನ ಆಗಿಲ್ಲ ಎಂದಿದ್ದಾರೆ.