Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರ ಜೇಬಿನಲ್ಲಿದ್ದ ಹಣ ಕಿತ್ತುಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು ,(ಜು 14) : ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ಜನ ವಿರೋಧಿ ಆಗುತ್ತಿದೆ ಎನ್ನುವುದನ್ನು ಬಿಡಿ ಬಿಡಿಯಾಗಿ ಬಿಚ್ಚಿಟ್ಟರು.

ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆಧ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ  ನಡೆಸಿದ , ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತ ಮುತ್ಯಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅತ್ಯಂತ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ತಿಳಿಸಿದರು.

ಜನರ ಜೇಬಿನಲ್ಲಿರುವುದನ್ನು ಕಿತ್ತುಕೊಂಡಿರಿ

ಕಾಂಗ್ರೆಸ್ ಗೆಲುವಿಗೆ ಕಾರಣವಾದ ಸಂಗತಿಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು “ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ಮು ಘೋಷಿಸಿ ಜಾರಿ ಮಾಡಿತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್ ನ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಹೀನಾಯವಾಗಿ ಸೋಲು ಕಾಣಬೇಕಾಯಿತು ಎಂದರು.

ಪಂಪ ಮತ್ತು ಹಿಟ್ಲರ್

ಕನ್ನಡ ಮಣ್ಣಿನ ಸೌಹಾರ್ದ ಪರಂಪರೆಯ 2000 ವರ್ಷಗಳ ಮೌಲ್ಯವನ್ಮು ವಿವರಿಸಿದ ಮುಖ್ಯಮಂತ್ರಿಗಳು, ಪಂಪ “ಮನುಷ್ಯ ಜಾತಿ ತಾನೊಂದೇ ವಲಂ” ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಹೀಗೆ ಪಂಪನಿಂದ ಹಿಡಿದು ಬಸವಣ್ಣನವರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ ಎಂದರು.

ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು ?

ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣ ಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿಗಳು, ‘ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು ?” ಎಂದು ಪ್ರಶ್ನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!