Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿರಿಧಾನ್ಯ ಬಳಸಿ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿಟ್ಟುಕೊಳ್ಳಿ : ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.15) : ಸಿರಿಧಾನ್ಯ, ಸೊಪ್ಪು, ತರಕಾರಿಗಳನ್ನು ಬಳಸಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದರು.

ನೆಹರು ಯುವ ಕೇಂದ್ರ, ಪ್ರಜಾಸೇವಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯ ಸಿರಿ ಮಿಲೆಟ್, ರೋಟರಿ ಕ್ಲಬ್, ಚಿನ್ಮೂಲಾದ್ರಿ ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ರೋಟರಿ ಬಾಲಭವನದಲ್ಲಿ ಶುಕ್ರವಾರ ನಡೆದ ಸಿರಿಧಾನ್ಯಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಮೂತ್ರ ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರಬೇಕು. ಅಲ್ಪಪ್ರಮಾಣದಲ್ಲಿ ಮೇಲಿಂದ ಮೇಲೆ ಊಟ ಮಾಡುತ್ತಿರಬೇಕು. ಸಕ್ಕರೆ ಕಾಯಿಲೆಯಿರುವವರು ಇಂತಹದ್ದೇ ಆಹಾರ ಸೇವಿಸಬೇಕೆಂದೇನು ಇಲ್ಲ. ಎಲ್ಲಾ ಆಹಾರವನ್ನು ಮಿತಿಯಾಗಿ ಬಳಸಬೇಕು. ರಾಗಿ, ಜೋಳ, ಸಜ್ಜೆ, ನವಣೆ, ಗೋಧಿ, ಬರಗು, ಸಾಮೆ, ಊದಲು, ಕೊರಲೆ, ಸೊಪ್ಪು, ತರಕಾರಿ, ನಾರಿನಾಂಶವುಳ್ಳ ಪದಾರ್ಥಗಳನ್ನು ಸೇವಿಸುವುದು ಒಳ್ಳಯದು ಎಂದು ಹೇಳಿದರು.

ರಾತ್ರಿ ಬೇಗ ಮಲಗಿ, ಬೆಳಿಗ್ಗೆ ಬೇಗ ಏಳುವ ಅಭ್ಯಾಸ ರೂಢಿಸಿಕೊಳ್ಳಬೇಕು. ದಿನಂಪೂರ್ತಿ ಲವಲವಿಕೆಯಿಂದ ಇರಬೇಕು. ಶುಗರ್ ಇದೆ ಎಂದು ಮಾನಸಿಕವಾಗಿ ಕುಗ್ಗಬಾರದು.

ಯೋಗ, ಧ್ಯಾನ, ಪ್ರಾಣಾಯಾಮ, ವಾಕ್ ಮಾಡುವುದು ಒಳಿತು. ನಿಯಮಿತ ಔಷಧಿ ಸೇವನೆ ಒಂದೆ ತರಹದ ಆಹಾರ ಪದ್ದತಿಯಿಂದ ಆರೋಗ್ಯಕ್ಕೆ ಹಾನಿಯಾಗಬಹುದು. ಸರಳ, ಸಂತೃಪ್ತ ಜೀವನವಿದ್ದಷ್ಟು ರೋಗದಿಂದ ದೂರವಿರಬಹುದು. ಕಿರುಧಾನ್ಯಗಳನ್ನು ಬಳಸುವುದರಿಂದ ದೇಹದಲ್ಲಿ ಕೊಬ್ಬಿನಾಂಶ
ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್ ಮಾತನಾಡಿ ಹಿಂದಿನ ಕಾಲದಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುತ್ತಿದ್ದರಿಂದ ಆಯಸ್ಸು ಜಾಸ್ತಿಯಿರುತ್ತಿತ್ತು. ಇಂದಿನ ಯುವ ಪೀಳಿಗೆಗೆ ಸಿರಿಧಾನ್ಯಗಳ ಸೇವನೆಯಿಂದಾಗುವ ಪ್ರಯೋಜನವನ್ನು ತಿಳಿಸಬೇಕಿದೆ ಎಂದು ಹೇಳಿದರು.

ಸಿರಿ ಮಿಲ್ಲೆಟ್ ಸಂಯೋಜನಾಧಿಕಾರಿ ಅಭಿಷೇಕ್ ಸಿರಿಧಾನ್ಯಗಳ ಪ್ರಾತ್ಯಕ್ಷಿಕೆ ಮತ್ತು ಅವುಗಳಿಂದ ತಯಾರಿಸಬಹುದಾದ ಆಹಾರ ಪದಾರ್ಥಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ರೋಟರಿ ಕ್ಲಬ್ ಅಧ್ಯಕ್ಷರಾದ ಕನಕರಾಜು, ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ಎಂ.ಬಿ.ಶಂಕರಪ್ಪ, ಕಾರ್ಯದರ್ಶಿ ಎಸ್.ಲಕ್ಷ್ಮಿಕಾಂತ್, ಗಾಯತ್ರಿ ಶಿವರಾಂ, ಅನುಸೂಯಮ್ಮ, ಓಂಕಾರಮ್ಮ, ಶ್ರೀನಿವಾಸ್, ಅರುಣ್‍ಕುಮಾರ್, ಎಸ್.ವಿ.ಗುರುಮೂರ್ತಿ ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment