Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಷ್ಮೆ ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.17) : ರೇಷ್ಮೆಗೂಡಿನ ದರ ತೀವ್ರ ಕುಸಿತಗೊಂಡಿರುವುದರಿಂದ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಕೆ.ಜಿ. 1ಕ್ಕೆ ರೂ.800/- ಕಡಿಮೆ ಇಲ್ಲದಂತೆ ನಿಗದಿ ಮಾಡಿ ಖರೀದಿ ಮಾಡಬೇಕು.  ಚಾಕಿ ಹುಳುವಿನ ದರ ಏರಿಕೆಯಾಗಿದ್ದು, ಚಾಕಿ ದರ ಕಡಿಮೆಗೊಳಿಸಿ ರೈತರಿಗೆ ಸಬ್ಸಿಡಿ ದರದ ರೂಪದಲ್ಲಿ ಚಾಕಿ ಹುಳುಗಳನ್ನು ವಿತರಿಸಬೇಕು, ಚಾಕಿ ಕೇಂದ್ರಗಳ ಗುಣಮಟ್ಟ ರಕ್ಷಣೆಗೆ ರೇಷ್ಮೆ ಇಲಾಖೆ ನಿಗವಹಿಸಬೇಕು ಸೇರಿದಂತೆ ಇತರೆ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಇತ್ತೀಚಿನ ವರ್ಷಗಳಲ್ಲಿ ನಮ್ಮ ಜಿಲ್ಲೆಯಲ್ಲಿ ವ್ಯಾಪಕವಾಗಿ ರೇಷ್ಮೆ ಕೃಷಿಯನ್ನು ಕೈಗೊಂಡಿದ್ದು, ಇದು ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು, ಬಹಳ ಜೋಪಾನವಾಗಿ ವೈಜ್ಞಾನಿಕ ಕ್ರಮ ಅನುಸರಿಸಿ ಬೆಳೆ ಬೆಳೆಯಬೇಕಾಗಿರುತ್ತದೆ. ಇದುವರೆಗೂ ಬೈವೋಲ್ಟಿನ್ ತಳಿಯ ಬೆಳೆಗೆ ಕೆ.ಜಿ 1ಕ್ಕೆ ರೂ.800/- ಇದ್ದು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಚೀನಾದಿಂದ ಹೆಚ್ಚಿನ ಪ್ರಮಾಣದಲ್ಲಿ ರೇಷ್ಮೆ ನೂಲು ಆಮದು ಮಾಡಿಕೊಂಡಿರುವುದರಿಂದ ಬೆಲೆ ಕುಸಿತ ಕಂಡಿರುತ್ತದೆ. ಸ್ಥಳೀಯ ಡೀಲರ್‍ಗಳು ರೇಷ್ಮೆ ಗೂಡಿಗೆ ಹೆಚ್ಚಿನ ಬೆಲೆಗೆ ಖರೀದಿ ಮಾಡುತ್ತಿಲ್ಲ. ಆದ್ದರಿಂದ ರೇಷ್ಮೆ ಬೆಳೆಗಾರರು ಕಾಂಗಲಾಗಿದ್ದು, ಉತ್ಪಾದನಾ ವೆಚ್ಚ ಅಧಿಕವಾದ ಕಾರಣ ರೇಷ್ಮೆ ಬೆಳೆಯನ್ನು ಕೈಬಿಡುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಿ ರೇಷ್ಮೆ ಬೆಳೆಗಾರರ ಹಿತ ಕಾಪಾಡಬೇಕೆಂದು ಮನವಿ ಮಾಡಲಾಯಿತು.

ರೇಷ್ಮೆಗೂಡಿಗೆ ಕೆ.ಜಿ 1ಕ್ಕೆ ರೂ.50/- ಇದ್ದ ಪ್ರೋತ್ಸಾಹ ಧನ ನಿಲ್ಲಿಸಲಾಗಿದ್ದು, ಕೂಡಲೇ ಪುನಾರಂಭಿಸಿ ಕೆ.ಜಿ. ರೂ.200/- ಕಡಿಮೆ ಇಲ್ಲದಂತೆ ಪ್ರೋತ್ಸಾಹ ಧನ ಸರ್ಕಾರ ನಿಗದಿಗೊಳಿಸಬೇಕು ರೇಷ್ಮೆಗೂಡಿನ ಸಾಗಣಿಕೆ ವೆಚ್ಚವನ್ನು ಬೇರೆ ಜಿಲ್ಲೆಗಳಂತೆ ನಮ್ಮ ಜಿಲ್ಲೆಗೂ ವಿಸ್ತರಿಸಬೇಕು. 5. ರೇಷ್ಮೆ ಹುಳುವಿನ ಸಾಕಾಣಿಕೆ ಮನೆಯನ್ನು ನಿರ್ಮಿಸಲು ಈಗ ರೂ.3 ಲಕ್ಷ ಸಹಾಯಧನ ನೀಡುತ್ತಿದ್ದು, ಎಲ್ಲಾ ವಸ್ತುಗಳು ಮತ್ತು ನಿರ್ಮಾಣದ ವೆಚ್ಚ ಅಧಿಕವಾಗಿರುವುದರಿಂದ ರೂ.6 ಲಕ್ಷಕ್ಕೆ ಜಾಸ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಮುಖಂಡರಾದ ಭೂತಯ್ಯ, ಮಂಜಪ್ಪ ಶಿವನಕೆರೆ, ಸಿ.ನಾಗರಾಜು ಮುದ್ದಾಪುರ, ಎಸ್.ಟಿ.ಚಂದ್ರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಕ್ಲಹಳ್ಳಿ ರವಿಕುಮಾರ್, ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ ಎಂ.ಬಿ.ತಿಪ್ಪೇಸ್ವಾಮಿ ಕಾಂತರಾಜು, ಮೂರ್ತಿ, ಮಹಂತಣ್ಣ, ಶಾಂತಣ್ಣ, ಮಲ್ಲಿಕಾರ್ಜನ ನಾಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!