Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ :ಸಿಎಂ

Facebook
Twitter
Telegram
WhatsApp

ಬೆಂಗಳೂರು: ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿಗೆ ಹಾನಿಗೊಳಗಾದ ಪ್ರದೇಶಗಳಗೆ ಸಿಎಂ ಕುದ್ದಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇನ್ನೂ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ ನೀರು ಮೇಲ್ಮಟ್ಟದಿಂದ ಅಗರ ಕೆರೆಗೆ ಹರಿದು ಬರುತ್ತಿದೆ. ಇದನ್ನು ತಡೆಗಟ್ಟಿ ಸಾಮರ್ಥ್ಯವನ್ನು ಹೆಚ್ಚಿಸಲು ಮುಖ್ಯ ಚರಂಡಿ ದುರಸ್ಥಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಅಗರ ಸುತ್ತುಲಿನ ಬಡಾವಣೆಗಳಿಗೆ ಪ್ರತ್ಯೇಕ ಚರಂಡಿ ನಿರ್ಮಾಣ ಕಾರ್ಯವನ್ನು 4-5 ತಿಂಗಳಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಒಳಚರಂಡಿ ಹಾಗೂ ಕೊಳಚೆ ನೀರನ್ನು ಪ್ರತ್ಯೇಕ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

ಬಡಾವಣೆಗಳಲ್ಲಿ ಯು.ಜಿ.ಡಿ ಲೆವೆಲ್ ಗಳಲ್ಲಿ ವ್ಯತ್ಯಾಸ ಉಂಟಾಗಿದ್ದು, ಅದನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ. ಅಗರ ಎಸ್.ಟಿ.ಪಿ ಘಟಕದ ಸಾಮರ್ಥ್ಯ 35 ಎಂ.ಎಲ್‌ಡಿ ಇದ್ದರೂ ಕೇವಲ 25 ಎಂ.ಎಲ್.ಡಿ ನೀರನ್ನು ಸಂಸ್ಕರಿಸುತ್ತಿದೆ. ಪರಿಶೀಲನೆ ವೇಳೆಯಲ್ಲಿ ಸಂಸ್ಕರಿತ ನೀರೂ ಸಹ ಚರಂಡಿಗೆ ಸೇರುತ್ತಿರುವುದನ್ನು ಗಮನಿಸಿದ್ದು, ತಕ್ಷಣವೇ ಇದನ್ನು ಸರಿಪಡಿಸಿ, ನೇರವಾಗಿ ಕೆರೆಗಳಿಗೆ ಹರಿಸಬೇಕೆಂದು ಈಗಾಗಲೇ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಮಡಿವಾಳ ಕೆರೆಗೆ ಹೊಂದಿಕೊಂಡಂತೆ ಇರುವ 4 ಎಂ.ಎಲ್.ಡಿ ಎಸ್.ಟಿ.ಪಿ ಘಟಕ ಕಾರ್ಯಾರಂಭ ಮಾಡಿಲ್ಲ. 4-5 ತಿಂಗಳ ಅವಧಿಯಲ್ಲಿ ಅದು ಕೂಡ ಸಂಪೂರ್ಣವಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ ಎಂದರು.

ಬಿ.ಬಿ.ಎಂ.ಪಿ, ಬೆಸ್ಕಾಂ, ಬಿ.ಡಬ್ಲೂ ಎಸ್.ಎಸ್.ಬಿ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು. ಗುಂಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಸಮಸ್ಯೆ ಬಗೆಹರಿಸಲು ಸಭೆ ಕರೆದು, ಪರಿಶೀಲಿಸಲಾಗುವುದು. ಸತತ ಮಳೆಯಿಂದಾಗಿ ದುರಸ್ಥಿ ಸಾಧ್ಯವಾಗುತ್ತಿಲ್ಲ. ಮಳೆ ಬಿಡುವು ನೀಡಿದ ಕೂಡಲೇ ಗುಂಡಿಗಳನ್ನು ಮುಚ್ಚಲು ಸಮರೋಪಾದಿಯಲ್ಲಿ ಕ್ರಮವಹಿಸಲಾಗುವುದು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!