ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಬಿಜೆಪಿಯನ್ನು ಮಣಿಸಲೇಬೇಕೆಂದುಕೊಂಡು ವಿಪಕ್ಷಗಳೆಲ್ಲಾ ಒಂದಾಗಿವೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಎಲ್ಲಾ ದಲಿತ, ಅಲ್ಪಸಂಖ್ಯಾತ, ಹಿಂದೂ ಹಾಗೂ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ. ಇವತ್ತಿನ ಸಭೆ ಫಲಪ್ರದವಾಗಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ. ಸರ್ಕಾರಗಳನ್ನು ಬಿಕಳಿಸುವುದು, ಶಾಸಕರನ್ನು ಖರೀದಿಸುವುದು ಬಿಜೆಪಿಯ ಗುರಿಯಾಗಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ, ಇಂಡಿಯಾವನ್ನು ಚಾಲೆಂಜ್ ಮಾಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೇ ನಾವು ನಮ್ಮ ತಾಯಿ ನಾಡನ್ನು ಪ್ರೀತಿಸುತ್ತೇವೆ. ಜನರಿಗಾಗಿ, ದೇಶಕ್ಕಾಗಿ ದುಡಿಯುತ್ತಿದ್ದೇವೆ. ಮುಂದಿನ ನಮ್ಮ ಎಲ್ಲ ಹೋರಾಟಗಳು ಇಂಡಿಯಾ ಹೆಸರಲ್ಲಿ ನಡೆಯಲಿವೆ. ನಮ್ಮನ್ನು ಎದುರಿಸಲು ಎನ್‌ಡಿಎ ಮೈತ್ರಿ ಕೂಟಕ್ಕೆ ಸಾಧ್ಯವಾಗುತ್ತಾ ಎಂದು ಕಿಡಿ ಕಾಡಿಕಾರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











