Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC / St ಸಮುದಾಯದ ಭೂಮಿ ಸಂರಕ್ಷಿಸಲು ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಪಿಟಿಸಿಎಲ್ ಕಾಯ್ದೆಗಳ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಇನ್ನು ಮಾಹಿತಿಗಳ ಪ್ರಕಾರ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮಂಜುರಾದ ಭೂಮಿಯನ್ನು ಮರುಸ್ಥಾಪಿಸಲು ಕೋರಿ ಅರ್ಜಿ ಹಾಕಲು ಯಾವುದೇ ಸಮಯದ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಈ ಸಂಬಂಧ ಸಿದ್ದರಾಮಯ್ಯ ಅವರು ಟ್ವೀಟ್ ಕೂಡ ಮಾಡಿದ್ದರು. ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ ಎಂದಿದ್ದರು. ಇದೀಗ 1978 ರ ಕಾಯಿದೆಯು ಸಮಯದ ಮಿತಿಯ ಬಗ್ಗೆ ಹೇಳಿಲ್ಲ ಮತ್ತು ಕಾನೂನಿನ ಬಲವನ್ನು ದುರ್ಬಲಗೊಳಿಸದಂತೆ ನೋಡಿಕೊಳ್ಳಲು ಸಂಘಟನೆಗಳು ಬೇಡಿಕೆ ಇಟ್ಟಿವೆ. ಹಾಗಾಗಿ ಎಸ್‌ಸಿ/ಎಸ್‌ಟಿ ಸಮುದಾಯದ ಭೂಮಿಯ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದ್ದಾರೆ.

ಇನ್ನು ಕೆಲವು ಪ್ರಕರಣಗಳಲ್ಲಿ 25-30 ವರ್ಷಗಳ ಹಿಂದೆ ಭೂಮಿ ಮಾರಾಟ ಅಥವಾ ವರ್ಗಾವಣೆ ನಡೆದ ಅರ್ಜಿದಾರ್ ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿವೆ. ಆದರೆ 2-3 ದಶಕಗಳ ಹಿಂದೆಯೇ ಇಂತಹ ಹಲವಾರು ವರ್ಗಾವಣೆಗಳು ನಡೆದಿದ್ದು, ಭೂ ಮಂಜೂರಾತಿದಾರರ ಕಾನೂನು ಬದ್ಧ ವಾರಸುದಾರರಿಗೆ ನ್ಯಾಯ ಸಿಗಬೇಕು ಎಂದು ದಲಿತ ಹೋರಾಟಗಾರರು ಇದನ್ನು ವಿರೋಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!