Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಜನ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಬೆಂಗಳೂರು(ಜು.19): ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿದಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಮುಖಕ್ಕೆ ಪೇಪರ್ ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದರು.

ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ  ಶಾಸಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ ನಂಬಿಕೆ. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ.

ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ.

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ ?

ದಿವಂಗತ ಅನಂತ್ ಕುಮಾರ್ ಅವರು ಬದುಕಿದ್ದಾಗ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು. ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ  ಮಾಡಿದ್ದಾರೆ. ಅವತ್ತು ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಯಾವ ರೀತಿ ನಡೆಸಿಕೊಂಡಿದ್ದೇವೋ ಈಗಲೂ ಅದೇ ರೀತಿ ನಡೆದುಕೊಂಡಿದ್ದೇವೆ. ಇದು ಹಿಂದಿನಿಂದ ನಡೆದುಕೊಂಡಿರುವ ಪದ್ಧತಿ. ಅದರಂತೆ ನಡೆಯುತ್ತಿದೆ. ಆದರೆ ಇವತ್ತು ಬಿಜೆಪಿ ಸದಸ್ಯರು ಅದನ್ನೆಲ್ಲಾ ಮರೆತರಂತೆ ಡ್ರಾಮಾ ಆಡುತ್ತಾ, ಅಮಾನವೀಯವಾಗಿ ವರ್ತಿಸಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ. ನಾವೂ ವಿರೋಧ ಪಕ್ಷದಲ್ಲಿದ್ದೆವು. ಇಷ್ಟು ಅಸಹ್ಯವಾಗಿ ನಡೆದುಕೊಂಡಿದ್ದ ಸಣ್ಣ ಉದಾಹರಣೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment