ನವ ದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ 2 ತಿಂಗಳ ಹಳೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಕಾಂಗ್ರೆಸ್ ಕೇಂದ್ರವನ್ನು ತೀವ್ರವಾಗಿ ಟೀಕಿಸಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಬಿಜೆಪಿ ಪ್ರಜಾಪ್ರಭುತ್ವ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.
“ಮಣಿಪುರದಲ್ಲಿ ಮಾನವೀಯತೆ ಸತ್ತು ಹೋಗಿದೆ. ನರೇಂದ್ರ ಮೋದಿ ಜೀ, ಭಾರತವು ನಿಮ್ಮ ಮೌನವನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ.
Humanity has died in Manipur.
Modi Govt and the BJP has changed Democracy and the rule of law into Mobocracy by destroying the delicate social fabric of the state. @narendramodi ji,
India will never forgive your silence.
If there is any conscience or an iota of shame left…
— Mallikarjun Kharge (@kharge) July 20, 2023