Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ : ವೆಂಕಟೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.20) : ಸರ್ಕಾರಿ ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕ್ಷೀಣಿಸುತ್ತಿರುವುದರಿಂದ ಉರ್ದು ಶಾಲೆಗಳು ಕಣ್ಮರೆಯಾಗುತ್ತಿವೆ ಎಂದು ಡಯಟ್‍ನ ಹಿರಿಯ ಉಪನ್ಯಾಸಕ ವೆಂಕಟೇಶ್ ಬೇಸರದಿಂದ ನುಡಿದರು.

ಮುಸ್ಲಿಂ ಎಜುಕೇಷನಲ್ ಅಂಡ್ ಎಂಪವರ್‍ಮೆಂಟ್ ಟ್ರಸ್ಟ್(ರಿ) ಚಿತ್ರದುರ್ಗ ವತಿಯಿಂದ ಇಲ್ಲಿನ ಅಹಮದ್ ಪ್ಯಾಲೇಸ್‍ನಲ್ಲಿ ಗುರುವಾರ ಉರ್ದು ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರೈಮರಿ, ಸೆಕಂಡರಿ ಶಿಕ್ಷಣ ಪೂರೈಸಿ ಡಿಗ್ರಿಗೆ ಬರುವಷ್ಟರೊತ್ತಿಗೆ ನೂರರಲ್ಲಿ ಶೇ.30 ಮುಸ್ಲಿಂ ಮಕ್ಕಳು ಮಾತ್ರ ಉಳಿದುಕೊಂಡಿರುತ್ತಾರೆ. ಮಿಕ್ಕವರು ಬಡತನ ಇನ್ನಿತರೆ ಕಾರಣಗಳಿಗಾಗಿ ಶಿಕ್ಷಣದಿಂದ ಹೊರಗುಳಿಯುವಂತಾಗಿದೆ.

ಯಾವುದೇ ಒಂದು ದೇಶ ಅಭಿವೃದ್ದಿಯಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಹಾಗಾಗಿ ಪೋಷಕರು ಮತ್ತು ಶಿಕ್ಷಕರುಗಳು ಗಂಭೀರವಾಗಿ ಚಿಂತಿಸಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂದು ಹೇಳಿದರು.

ಮಕ್ಕಳು ಶಿಕ್ಷಣವಂತರಾಗಬೇಕೆಂದು ಸರ್ಕಾರದ ಉದ್ದೇಶ. ಆದರೆ ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗುತ್ತಿದ್ದು, ಶಿಕ್ಷಕರುಗಳ ಸಂಖ್ಯೆ ಜಾಸ್ತಿಯಿರುವುದರಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಮುಜುಗರವಾಗುತ್ತಿದೆ. ಶಾಲೆಗೆ ಬರುವ ಮಕ್ಕಳನ್ನು ನಿಮ್ಮ ಮಕ್ಕಳಂತೆ ಪ್ರೀತಿಸಿ ಹಾಜರಾತಿ ಹೆಚ್ಚಳವಾಗುವಂತೆ ನೋಡಿಕೊಳ್ಳುವಲ್ಲಿ ನಿಮ್ಮ ಪಾತ್ರ ತುಂಬಾ ಮುಖ್ಯ ಎಂದು ಶಿಕ್ಷಕರುಗಳಿಗೆ ಕರೆ ನೀಡಿದ ವೆಂಕಟೇಶ್ ಉರ್ದು ಜೊತೆಗೆ ಮಕ್ಕಳಿಗೆ ಕನ್ನಡವನ್ನು ಕಲಿಸಿ ಎಂದು ತಾಕೀತು ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾರುತೇಶ್ ಮಾತನಾಡಿ ಶಿಕ್ಷಣ ಪಡೆದು ಒಂದು ಹಂತಕ್ಕೆ ಏರಿದವರು ಸಮಾಜದ ಕಡೆಗೆ ತಿರುಗಿ ನೋಡುವುದಿಲ್ಲ. ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಎಂದಿಗೂ ತಮಗಾಗಿ ಬದುಕಲಿಲ್ಲ. ದೇಶಕ್ಕಾಗಿ ಬದುಕಿದರು.

ಸರ್ಕಾರಿ ಉರ್ದು ಶಾಲೆಗಳ ಸಬಲೀಕರಣವಾಗಬೇಕಾದರೆ ಗುಣಮಟ್ಟದ ಶಿಕ್ಷಣ ನೀಡಬೇಕು. ದೇಶದ ಭವಿಷ್ಯ ನಿರ್ಮಾಣವಾಗುವುದು ಶಾಲೆಗಳಿಂದ ಸಾಮಾಜಿಕ, ಆರ್ಥಿಕ ಸಮಸ್ಯೆ ನಿವಾರಣೆಯಾಬೇಕಾದರೆ ಶಿಕ್ಷಣವೊಂದೆ ಅಸ್ತ್ರ ಎಂದು ಹೇಳಿದರು.

ಮಕ್ಕಳನ್ನು ಪ್ರೀತಿಸುವವರೆ ನಿಜವಾದ ಶಿಕ್ಷಕರು, ಏಳನೇ ವೇತನ ಆಯೋಗ, ಬಡ್ತಿ ಮತ್ತು ವೇತನ ಶ್ರೇಣಿಯಲ್ಲಿನ ತಾರತಮ್ಯ ನಿವಾರಣೆಗಾಗಿ ಸರ್ಕಾರ ಮತ್ತು ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ. ನಿಮ್ಮ ಸಮಸ್ಯೆಗಳ ನಿವಾರಣೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಸಮಸ್ಯೆ ಸವಾಲುಗಳ ನಡುವೆ ಪ್ರಾಮಾಣಿಕವಾಗಿ ಕೆಲಸ ಮಾಡೋಣ. ಸಾವಿತ್ರಿ ಬಾಪುಲೆ ಜನ್ಮ ದಿನವನ್ನು ಶಿಕ್ಷಕಿ ದಿನಾಚರಣೆಯನ್ನಾಗಿ ಆಚರಿಸಬೇಕು. ಫಾತಿಮ ಶೇಖ್ ಮೊಟ್ಟ ಮೊದಲ ಶಿಕ್ಷಕಿ ಎನ್ನುವುದನ್ನು ಸ್ಮರಿಸಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಗಿರಿಜ ಮಾತನಾಡುತ್ತ ಉರ್ದು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹೃದಯದ ಮಿಡಿತವನ್ನು ಹೇಳುವ ಶಕ್ತಿ ಭಾಷೆಗಿದೆ. 24 ಭಾಷೆಗಳಲ್ಲಿ ಉರ್ದು ಕೂಡ ಒಂದು. ಭಾಷಾ ಶಿಕ್ಷಕರ ಅವಶ್ಯಕತೆ ಹಾಗೂ ಜವಾಬ್ದಾರಿ ಜಾಸ್ತಿಯಿದೆ. ಬಡತನದ ಕಾರಣಕ್ಕಾಗಿ ಮುಸ್ಲಿಂ ಮಕ್ಕಳು ಶಿಕ್ಷಣದಿಂದ ಹೊರಗುಳಿಯುತ್ತಿರುವುದು ಕಂಡು ಬರುತ್ತಿದೆ. ಶಿಕ್ಷಣದ ಜೊತೆ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠವನ್ನು ಹೇಳಿಕೊಡುವಂತೆ ಉರ್ದು ಶಿಕ್ಷಕರಿಗೆ ಕರೆ ನೀಡಿದರು.

ಕಷ್ಟ, ಅವಮಾನ, ಸಮಸ್ಯೆ, ಸವಾಲುಗಳನ್ನು ಸ್ವೀಕರಿಸಿದಾಗ ಮಾತ್ರ ಜೀವನದಲ್ಲಿ ಗಟ್ಟಿಯಾಗಿ ನಿಲ್ಲಲು ಸಾಧ್ಯ. ಬಿಲ್ ಮತ್ತು ಬೆಲ್‍ಗಾಗಿ ಕೆಲಸ ಮಾಡಬೇಡಿ. ಸರ್ಕಾರ ಕೈತುಂಬಾ ಸಂಬಳ ಕೊಡುತ್ತಿದೆ. ನೀವು ಮಾಡುವ ಕೆಲಸದಿಂದ ಆತ್ಮತೃಪ್ತಿಯಾಗಬೇಕು ಎಂದು ತಿಳಿಸಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸಂಪತ್ ಮಾತನಾಡಿ ಭಾಷೆ ಕೇವಲ ಸಂವಹನಕ್ಕಾಗಿ ಅಲ್ಲ. ಸಂಸ್ಕøತಿಯನ್ನು ಪ್ರತಿಬಿಂಭಿಸುವ ಸಾಧನ. ಭಾಷೆ ಉಳಿಯಬೇಕಾದರೆ ಸಂಸ್ಕøತಿ ಉಳಿಯಬೇಕು. ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಿ ಆಧುನಿಕ ಜಗತ್ತಿಗೆ ಮುಂದಿನ ಪೀಳಿಗೆಯನ್ನು ತೋರಿಸಬೇಕಾಗಿರುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ಹೇಳಿದರು.

ಮುಸ್ಲಿಂ ಎಜುಕೇಷನಲ್ ಅಂಡ್ ಎಂಪವರ್‍ಮೆಂಟ್ ಟ್ರಸ್ಟ್ ಅಧ್ಯಕ್ಷ ನಿವೃತ್ತ ಡಿ.ವೈ.ಎಸ್ಪಿ. ಸೈಯದ್ ಇಸಾಖ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಿವೃತ್ತ ಡಿ.ವೈ.ಎಸ್ಪಿ.ಗಳಾದ ಅಬ್ದುಲ್ ರೆಹಮಾನ್, ಯೂಸೂಫ್, ನಿವೃತ್ತ ಪ್ರಾಚಾರ್ಯರಾದ ಮಹಮದ್ ಜಕಾವುಲ್ಲಾ ವೇದಿಕೆಯಲ್ಲಿದ್ದರು.

ಇ.ಸಿ.ಓ.ಸಮೀರ ಕಾರ್ಯಾಗಾರದಲ್ಲಿ ಹಾಜರಿದ್ದರು. ಸಂಪನ್ಮೂಲ ವ್ಯಕ್ತಿಗಳಿಂದ ಉರ್ದು ಶಿಕ್ಷಕರಿಗೆ ಉಪನ್ಯಾಸ ನೀಡಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment