ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದ ಕಾಂಗ್ರೆಸ್, ಬಳಿಕ ಐದು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಶಕ್ತಿ ಯೋಜನೆಯ ಲಾಭವನ್ನು ಎಲ್ಲಾ ಮಹಿಳೆಯರು ಪಡೆಯುತ್ತಿದ್ದಾರೆ. ಅದರ ಜೊತೆಗೆ ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗೂ ಅರ್ಜಿ ಹಾಕಲು ಸೂಚನೆ ನೀಡಲಾಗಿದೆ.
ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಎಂದು ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಬೇಕು.
ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಮತ ಕೇಳಲಾಗಿದೆ ಎಂದು ಕೆ ಎನ್ ಶಂಕರ್ ಎಂಬುವವರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸದ್ಯ ಎಲ್ಲಾ ಯೋಜನೆಗಳ ಲಾಭವನ್ನು ಜನ ಸದ್ಯದರಲ್ಲಿಯೇ ಪಡೆಯಲಿದ್ದಾರೆ.