ಬೆಂಗಳೂರು: ಇಂದು ಕಾಂಗ್ರೆಸ್ ನಲ್ಲಿ ಆ ಒಂದು ಹೇಳಿಕೆ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದರು. ಸಿಎಂ ಮಾಡೋದು ಗೊತ್ತು, ಕೆಳಗೆ ಇಳಿಸುವುದು ಗೊತ್ತು ಎಂದು ಕಾರ್ಯಕ್ರಮದಲ್ಲಿ ಹೇಳಿದ್ದರು. ಇದಕ್ಕೆ ಹಲವರು ಬೆಂಬಲ ಸೂಚಿಸಿಯೂ ಮಾತನಾಡಿದ್ದಾರೆ.
ಇನ್ನು ಹಲವರು ಈ ಮಾತಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪರಮಾಪ್ತರಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಈ ಮಾತಿಗೆ ತಿರುಗೇಟು ನೀಡಿದ್ದು, ನಮ್ಮ ಪಕ್ಷದಲ್ಲಿ ಸಿಎಂ ಆಯ್ಕೆ ಮಾಡೋದು ಹೈಕಮಾಂಡ್ ಕಡೆಯಿಂದ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಸಿಎಂ ಆಯ್ಕೆ ಮಾಡ್ತಾರೆ. ನಾನು ಮತ್ತು ಹರಿಪ್ರಸಾದ್ ಸಿಎಂ ಆಯ್ಕೆ ಮಾಡೋದಲ್ಲ. ರಾಜ್ಯದಲ್ಲಿ ಸದ್ಯಕ್ಕಂತು ಸಿಎಂ ಬದಲಾವಣೆ ಆಗಲ್ಲ ಎಂದಿದ್ದಾರೆ.
ಇನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಹರಿಪ್ರಸಾದ್ ಯಾವ ಕಾರಣಕ್ಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಇದು ಅನವಶ್ಯಕ, ಬಹುಶಃ ಹಾಗೆ ಹೇಳಿರೋಕೆ ಸಾಧ್ಯವಿಲ್ಲ. ನಮ್ಮ ಪಾರ್ಟಿಯಲ್ಲಿ ಆ ತರಹದ ಆಲೋಚನೆ ಇಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಯಾವುದೇ ಅಪಸ್ವರ ಇಲ್ಲ. ಸಿಎಂ ಸದೃಢವಾಗಿದ್ದಾರೆ, ಸರ್ಕಾರವು ಸದೃಢವಾಗಿದೆ. ಐದು ಗ್ಯಾರಂಟಿ ಕೊಟ್ಟಿರುವುದೇ ನಮ್ಮ ಪಕ್ಷಕ್ಕೆ ಹೆಗ್ಗಳಿಕೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











