Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿ ಭ್ರಷ್ಟಾಚಾರ ಆಡಳಿತದಿಂದ ರಾಜ್ಯದಲ್ಲಿ ಹೀನಾಯ ಸೋಲು.!

---Advertisement---

 

ಕುರುಗೋಡು.ಜು.23

ಪಿಎಸ್‌ಐ ಹಗರಣದ ಕರ್ಮಕಾಂಡ ಸೇರಿದಂತೆ ಹಲವು ಕರ್ಮಕಾಂಡಗಳಿಂದ ರಾಜ್ಯದಲ್ಲಿ ಹೀನಾಯ ಸೋಲು ಕಾಣುವಂತಾಗಿದೆ ಬಿಜೆಪಿಗೆ ಎಂದು ಬಳ್ಳಾರಿಯ ಮಾಜಿ ಸಂಸದ ವಿ.ಉಗ್ರಪ್ಪ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.

ಅವರು ಪಟ್ಟಣದ ಶಾಸಕರ ಕಛೇರಿ ಸಭಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು,

ಆದರೆ ರಾಜ್ಯದ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಜನತೆಗೆ ಕೊಟ್ಟಮಾತಿನಂತೆ ವಚನಪಾಲನೆ ಮಾಡಿದೆ. ಇಂಥಹ ಕಾಂಗ್ರೆಸ್‌ಪಕ್ಷವನ್ನು ಮುಂಬರುವ ಚುನಾವಣೆಯಲ್ಲಿ ಬೆಂಬಲಿಸಬೇಕೆಂದು ಎಂದು ಹೇಳಿದರು.

ಪ್ರಧಾನಮಂತ್ರಿ ನರೆಂದ್ರಮೋದಿಯವರು ಅಧಿಕಾರಕ್ಕೆ ಬಂದಮೇಲೆ ದೇಶವನ್ನು ಸಾಲದ ಕೂಪಕ್ಕೆ ತಳ್ಳಿದ್ದಾರೆ. ಯುವಕರಿಗೆ ನಿರುದ್ಯೋಗ, ಬಡತನ, ಹಸಿವು, ಬೆಲೆ ಏರಿಕೆಯನ್ನು ಹೆಚ್ಚುಮಾಡಿ ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇದೇನಾ ಮೋದಿಯವರು ಅಚ್ಚೇದಿನ್ ಎಂದು ಮೋದಿ ಬಗ್ಗೆ ವ್ಯಂಗ್ಯವಾಡಿದರು.

2014ರಲ್ಲಿ ಮೋದಿ ಅವರು ಪ್ರಣಾಳಿಕೆಯಲ್ಲಿ ನಾವು ದೇಶದಲ್ಲಿ ಅಧಿಕಾರಕ್ಕೆ ಬಂದರೆ, ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು, ಜನರ ಖಾತೆಗೆ 15 ಲಕ್ಷ ಹಾಕುತ್ತೇವೆಂದು ಸುಳ್ಳು ಆಶ್ವಾಸನೆ ನೀಡಿ ಅಧಿಕಾರ ಬಂದ, ದಿನದಿಂದಲೂ ಇದುವರೆಗೂ ಜನರ ಖಾತೆಗೆ ಹಣ ಹಾಕಲಿಲ್ಲ. ಮಣಿಪುರದಲ್ಲಿ ಹತ್ಯಾಚಾರ, ಮಹಿಳೆಯ ಬೆತ್ತಲ ಮೆರವಣಿಗೆ ನಡೆದರೂ, ಸೌಜನ್ಯಕ್ಕಾದರೂ ಮೋದಿ ಭೇಟಿ ನೀಡುವುದಕ್ಕೆ ಆಗುತ್ತಿಲ್ಲ. ಮೋದಿ ಅವರು ಸುಳ್ಳಿನ ರಾಜಕೀಯ ಮಾಡುವ ಜತೆಗೆ ಶೋಕಿಲಾಲ್ ಆಗಿ ಮೆರೆಯುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಜನತೆಗೆ ಕೊಟ್ಟಮಾತಿನಂತೆ ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್‌ಪ್ರಯಾಣ, ಗೃಲಕ್ಷ್ಮಿ ಯೋಜನೆ ಸೇರಿದಂತೆ ಇತರೆ ೫ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಂದಾಗಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆದರೆ ದೇಶದ ಪ್ರಧಾನಮಂತ್ರಿ ನರೇಂದ್ರಮೋದಿಯವರು ದೇಶದ ಅಭಿವೃದ್ದಿಕಡೆ ಗಮನಹರಿಸದೇ ಬರೀ ಸುಳ್ಳು ಭರವಸೆ ನೀಡುತ್ತಾ ದೇಶ-ವಿದೇಶಗಳನ್ನು ಸುತ್ತುತ್ತಿದ್ದಾರೆ, ಕೇಂದ್ರದ ಉಗ್ರಾಣದಲ್ಲಿ ಬಡವರಿಗೆ ಹಂಚುವ ಅಕ್ಕಿಯನ್ನು ಇಟ್ಟುಕೊಂಡು, ರಾಜ್ಯಕ್ಕೆ ಅಕ್ಕಿಯನ್ನು ನೀಡಲಾಗುವುದಿಲ್ಲ ಎಂದು ಹೇಳಿದ ಮೋದಿಯವರು, ಬಡವರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಲೇವಡಿಮಾಡಿದರು.

ಈ ಭಾಗದಲ್ಲಿ ರೈತರ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದಿಂದ ರೈತರಿಗೆ ಸಮರ್ಪಕವಾಗಿ ನೀರು ಪೂರೈಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಚನಭಷ್ಟ ಬಿಜೆಪಿಗೆ ತಕ್ಕಪಾಠಕಲಿಸಿ, ವಚನಪಾಲನೆ ಮಾಡುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆAದು ಮನವಿಮಾಡಿದರು.

ಈ ಸಂದರ್ಭದಲ್ಲಿ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಬಂಗಿಮಲ್ಲಯ್ಯ, ಮುಖಂಡ ರಘುರಾಮಕೃಷ್ಣ, ಸುರೇಶರೆಡ್ಡಿ, ಚಾನಾಳು ಆನಂದ, ಟಿ.ಸಿದ್ದಪ್ಪ, ಪಕ್ಷದ ವಕ್ತಾರ ಚಾನಾಳು ಚೆನ್ನಬಸವರಾಜ್, ಕುರುಗೋಡು ಪುರಸಭೆಯ ಸದಸ್ಯರು, ಸೇರಿದಂತೆ ಕಂಪ್ಲಿ ಕ್ಷೇತ್ರದ ವಿವಿದ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment