Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುದ್ದಿಒನ್ ಶತಮಾನದ ಸಂತ ವಿಶೇಷ ಸಂಚಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರ ಉತ್ತಮ ಪ್ರತಿಕ್ರಿಯೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.18): ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಶೂನ್ಯ ಪೀಠಾಧ್ಯಕ್ಷ ಹಾಗೂ ತ್ರಿವಿಧ ದಾಸೋಹಿಗಳಾದ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರ 30 ನೇ ವರ್ಷದ ಪೀಠಾರೋಹಣ ತೃತೀಯ ದಶಮಾನೋತ್ಸವದ ಪ್ರಯುಕ್ತ ಚಿತ್ರದುರ್ಗದ ಪಿ.ಎಲ್. ನಾಗೇಂದ್ರ ರೆಡ್ಡಿ ಸಾರಥ್ಯದ ನಂ. 1 ಆನ್ಲೈನ್ ನ್ಯೂಸ್ ಪೋರ್ಟಲ್ ಸುದ್ದಿಒನ್ ಹೊರ ತಂದಿರುವ ಶತಮಾನದ ಸಂತ ವಿಶೇಷ ಸಂಚಿಕೆಯನ್ನು ವೇದಿಕೆಯ ಮೇಲೆ ನೆರೆದಿದ್ದ ಬಹುತೇಕ ಗಣ್ಯರು ಓದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಶೂನ್ಯ ಪೀಠಾಧ್ಯಕ್ಷ ಹಾಗೂ ತ್ರಿವಿಧ ದಾಸೋಹಿಗಳಾದ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರ 30ನೇ ವರ್ಷದ ಪೀಠಾರೋಹಣ ತೃತೀಯ ದಶಮಾನೋತ್ಸವದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ವಿಶೇಷ ಸಂಚಿಕೆ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕನ್ನಡಪ್ರಭ ಸಂಪಾದಕ ರವಿ ಹೆಗಡೆ ಮಾತನಾಡಿ, ಗಾಂಧೀಜಿ, ಅಂಬೇಡ್ಕರ್ ಬಸವಣ್ಣನವರ ಹೆಸರು ಹೇಳುತ್ತಾರೆ.  ಆದರೆ ಅವರ ತತ್ತ್ವಗಳನ್ನು ಅನುಸರಿಸುವುದಿಲ್ಲ. ಶ್ರೀಗಳು ಬಂಗಾರದ ಕಿರೀಟ, ಗದ್ದುಗೆ ಮತ್ತು ಸ್ವಾಮಿ ಎನ್ನುವ ಪದನಾಮವನ್ನು ತ್ಯಜಿಸಿ ಶರಣರು ಎಂಬ ಪದನಾಮವನ್ನು ಹೊಂದಿದರು ಎಂದು ತಿಳಿಸಿದರು.

ವಿಧವೆಯರಿಗೆ ಮರುವಿವಾಹ ಮಾಡಿಸಿದರು. ಕೆಟ್ಟ ಚಟಗಳನ್ನು ತನ್ನ ಜೋಳಿಗೆಗೆ ಹಾಕಿಸಿಕೊಂಡು ಅದರಿಂದ ಬಿಡುಗಡೆಗೊಳಿಸಿದರು.  ಅನೇಕ ಶೋಷಿತ ಸಮುದಾಯದವರಿಗೆ ಮಠಗಳನ್ನು ಸ್ಥಾಪಿಸಿದರು.  ಹಾಗೆಯೇ ಈ ಕಾರ್ಯಕ್ರಮದ ನಿರೂಪಣೆಯನ್ನು ಒಬ್ಬ ಮುಸ್ಲಿಂ ಮಹಿಳೆ ನಿರ್ವಹಿಸುತ್ತಿರುವುದು ಶ್ರೀಗಳ ಸಾಧನೆ ಎಂದು ಹೇಳಿದರು.

ಚಿತ್ರದುರ್ಗ ಶ್ರೀ ಮಾದಾರ ಚನ್ನಯ್ಯ ಗುರುಪೀಠದ  ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ,  ಎಲ್ಲ ಶೋಷಿತ ಸಮುದಾಯಗಳಿಗೆ ಶ್ರೀಗಳು ಸಮಾನತೆ ನೀಡಿದ್ದಾರೆ.   ದೀಕ್ಷೆ ಪಡೆದ ಪ್ರತಿಯೊಬ್ಬರಿಗೂ 5 ಎಕರೆ ಭೂಮಿಯನ್ನು ನೀಡಿ ಮಠಗಳನ್ನು ಸ್ಥಾಪಿಸಿಕೊಂಡು  ಅಭಿವೃದ್ಧಿಯತ್ತ ಸಾಗುವಂತೆ ಪ್ರೇರಣೆ ನೀಡಿದವರು ಮುರುಘಾ ಶರಣರು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಅವರ ಸಹಕಾರವು ಇಲ್ಲಿ ಪ್ರಮುಖ. ಬಸವರಾಜ ಬೊಮ್ಮಾಯಿ ಅವರು ಸಹ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.  ಬಸವಣ್ಣನವರ ಇಚ್ಛೆಯ ಸಮಸಮಾನತೆಯ ದಿನಾಚರಣೆಯನ್ನು ಜಾರಿಗೆ ತರಬೇಕೆಂಬ ಇಂಗಿತವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ತಿಳಿಸಿದರು.

ಇಂಡಿಯನ್ ಎಕ್ಸ್ ಪ್ರೆಸ್ ಎಡಿಟರ್ ಸಾಂತ್ವನಾ ಭಟ್ಟಾಚಾರ್ಯ ಮಾತನಾಡಿ, ಕ್ಯಾಪಿಟೇಬಲ್ ಇದು ಶರಣರ ತತ್ವಗಳು, ಧಾರ್ಮಿಕ , ಶೈಕ್ಷಣಿಕ, ಆಧ್ಯಾತ್ಮಿಕ, ಶ್ರೀಮಠದ ನೈಜ ಮಾಹಿತಿಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಚಂದ್ರಪ್ಪ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಎಸ್ಪಿ ರಾಧಿಕಾ, ಸಿಇಒ ಡಾ. ನಂದಿನಿ, ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಉತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ನವೀನ್ ಇತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!