Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿ.ಎಸ್.ಜಯಲಕ್ಷ್ಮೀ ನಿಧನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಜು.23): ತುರುವನೂರು ರಸ್ತೆ ಆರ್‌ಟಿಒ ಕಚೇರಿ ಹಿಂಭಾಗದ ಬಿ.ಎಲ್.ಗೌಡ ಲೇಔಟ್ ಬಡಾವಣೆ ನಿವಾಸಿ ಜಿ.ಎಸ್.ಜಯಲಕ್ಷ್ಮೀ (65) ಸೋಮವಾರ ಮುಂಜಾನೆ ನಿಧನರಾದರು.

ಪತಿ ಕುರುಬ ಸಂಘದ ತಾಲೂಕಾಧ್ಯಕ್ಷ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಬಿ.ಜಗನ್ನಾಥ್, ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಕುಟುಂಬದವರನ್ನು ಅಗಲಿದ್ದಾರೆ. ಹಿರಿಯೂರು ತಾಲೂಕು ಹುಲಿತೊಟ್ಲು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.

ಚಿತ್ರದುರ್ಗ ಎಪಿಎಂಸಿ ಆವರಣದಲ್ಲಿ ಪ್ರಥಮ ಬಾರಿಗೆ ದಲ್ಲಾಳಿ ಮಂಡಿ ತೆರೆದ ಖ್ಯಾತಿ ಹೊಂದಿದ್ದ ದಿ.ಗಿರಿಯಪ್ಪನವರ ಪುತ್ರಿ ಜಯಲಕ್ಷ್ಮೀ, ಅನೇಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಅಂತಿಮ ದರ್ಶನ: ನಗರದ ಬಿ.ಎಲ್.ಗೌಡ ಲೇಔಟ್ ಬಡಾವಣೆಯಲ್ಲಿನ ನಿವಾಸದಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕುರುಬ ಸಂಘದ ಜಿಲ್ಲಾಧ್ಯಕ್ಷ ಎಸ್.ಶ್ರೀರಾಮ್, ನಗರಸಭೆ ಮಾಜಿ ಅಧ್ಯಕ್ಷ ಎಚ್.ಮಂಜಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಿಶಾನಿ ಜಯಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಸರ್ಕಾರಿ ನೌಕರ ಸಂಘದ ನಿರ್ದೇಶಕರಾದ ಕಲ್ಲೇಶ್ ಡಿ.ಮೌರ್ಯ, ಶಿಕ್ಷಕ ಕೆಂಚಪ್ಪ ಹಾಗೂ ರೋಟರಿ, ಇನ್ನರ್‌ವ್ಹೀಲ್ ಕ್ಲಬ್ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನೂರಾರು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!