Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 25 ರಂದು ಶಾಸಕ ಕೆ.ಸಿ. ವೀರೇಂದ್ರ ಅವರಿಂದ ಡಿವೈಡರ್ ಕಾಮಗಾರಿಗಳ ವೀಕ್ಷಣೆ ಹಾಗೂ ಅಹವಾಲು ಆಲಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ,(ಜು.24): ನಗರದ ವಿವಿಧೆಡೆ ರಸ್ತಗಳಲ್ಲಿ ನಿರ್ಮಾಣಗೊಂಡಿರುವ ಡಿವೈಡರ್‍ಗಳು ಹಾಗೂ ಇತರೆ ಕಾಮಗಾರಿಗಳ ಕುರಿತು ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಹಾಗೂ ಇವರೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಸಮಕ್ಷಮದಲ್ಲಿ ಜು. 25 ರಂದು ಮಧ್ಯಾಹ್ನ 01 ಗಂಟೆಯಿಂದ ವೀಕ್ಷಣೆ ನಡೆಸುವರು ಅಲ್ಲದೆ ಈ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸುವರು.

ಜು. 25 ರಂದು ಮಧ್ಯಾಹ್ನ 01 ಗಂಟೆಗೆ ಹೊಳಲ್ಕೆರೆ ರಸ್ತೆ ಕನಕದಾಸ ವೃತ್ತ ಬಳಿಯಿಂದ ಕಾಮಗಾರಿಗಳ ವೀಕ್ಷಣೆ ಪ್ರಾರಂಭವಾಗಲಿದ್ದು, ಬಳಿಕ ಗೌರಸಮುದ್ರ ಮಾರಮ್ಮ ದೇವಸ್ಥಾನ ಬಳಿ, ಹೆಡ್ ಪೋಸ್ಟ್ ಆಫೀಸ್, ಗಾಂಧಿ ಸರ್ಕಲ್, ಎಸ್‍ಬಿಐ ಬ್ಯಾಂಕ್ ಸರ್ಕಲ್, ಪ್ರವಾಸಿ ಮಂದಿರ, ವಿ.ಪಿ. ಬಡಾವಣೆ ರಸ್ತೆ ಮತ್ತು ಜೆಸಿಆರ್ ರಸ್ತೆ, ಆರ್‍ಟಿಒ ಕಚೇರಿ ರಸ್ತೆ, ತುರುವನೂರು ರಸ್ತೆ, ಮದಕರಿ ನಾಯಕ ವೃತ್ತ, ಸಾರ್ವಜನಿಕ ಆಸ್ಪತ್ರೆ ಮುಂಭಾಗ ಹಾಗೂ ಚಳ್ಳಕೆರೆ ಗೇಟ್ ವರೆಗಿನ ಡಿವೈಡರ್ ಕಾಮಗಾರಿಗಳು ಮತ್ತು ಇತರೆ ಕಾಮಗಾರಿಗಳ ವೀಕ್ಷಣೆ ಮಾಡುವರು.  ಸಾರ್ವಜನಿಕರು ಈ ಬಗ್ಗೆ ಸೂಕ್ತ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಚಿತ್ರದುರ್ಗ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment