ಸುದ್ದಿಒನ್, ಚಿತ್ರದುರ್ಗ: ಉಪಚುನಾವಣಾ ಕಣ ರಂಗೇರಿದ್ದು, ಪ್ರಚಾರಕ್ಕಾಗಿ ಘಟಾನುಘಟಿ ನಾಯಕರು ಕಣಕ್ಕಿಳಿಯುತ್ತಿದ್ದಾರೆ. ಇದೀಗ ಇಂದು ಬಿಜೆಪಿ ಪಕ್ಷ ಉಪಚುನಾವಣಾ ಕಣದ ಪ್ರಚಾರ ಕಾರ್ಯ ಆರಂಭಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿದ್ದರು. ಅವರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಾಥ್ ಕೂಡ ಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಉಪಚುನಾವಣೆಯ ಬಗ್ಗೆ ಮಾತನಾಡಿದ್ರು. ಪಕ್ಷ ಗೆಲ್ಲುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.
ಇದೇ ವೇಳೆ ಬೊಮ್ಮಾಯಿ ಆರ್.ಎಸ್.ಎಸ್ ರಿಮೋಟ್ ಕಂಟ್ರೋಲ್ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ಅರ್.ಎಸ್.ಎಸ್ ಹಿಡಿತದಲ್ಲಿ ಇರುವುದಕ್ಕೆ ಬೇಸರವಿಲ್ಲ. ಆರ್.ಎಸ್.ಎಸ್. ರಾಷ್ಟ್ರ ಕಟ್ಟುವ ಕೆಲಸ ಮಾಡ್ತಿದೆ. ನಾನು ರಾಷ್ಟ್ರ ಕಟ್ಟುವ ಕೆಲಸ ಮಾಡುವ ಸಂಘಟನೆಯ ಹಿಡಿತದಲ್ಲಿದ್ದೆನೆ ಅಂದುಕೊಳ್ಳಲಿ ಎಂದು ಹೇಳಿದರು.
ನಾನು ಸಮರ್ಪಣಾ ಭಾವದಿಂದ ರಾಷ್ಟ್ರ ಕಟ್ಟುವ ಕೆಲಸ ಮಾಡುತ್ತಿದ್ದೇನೆ. ಆದರೆ ಸಿದ್ದರಾಮಯ್ಯ ಅವರು ಒಂದು ಕುಟುಂಬದ ಹಿಡಿತದಲ್ಲಿರುವುದಕ್ಕೆ ನನಗೆ ಬೇಸರವಾಗುತ್ತಿದೆ. ಸಮಾಜವಾದಿ ಪಕ್ಷದಿಂದ ಬಂದಿರುವ ಅವರು ಒಂದು ಕುಟುಂಬದ ಹಿಡಿತದಲ್ಲಿರುವುದಕ್ಕೆ ನನಗೆ ಬಹಳ ಬೇಸರವಿದೆ. ಮಾಧ್ಯಮಗಳ ಒಂದೇ ಒಂದು ಪ್ರಶ್ನೆಗೆ ಉತ್ತರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮುನ್ನಡೆದರು.