ದಾವಣಗೆರೆ : ಜಿಲ್ಲೆಯಲ್ಲಿ ಜುಲೈ 24 ರಂದು ಸುರಿದ ಮಳೆ ವಿವರ

2 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ (ಜುಲೈ.25) : ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 11.4 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 11.38  ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 7.1 ಮಿ.ಮೀ ಹಾಗೂ ವಾಸ್ತವ ಮಳೆ 14.8 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.5 ಮಿ.ಮೀ ಹಾಗೂ ವಾಸ್ತವ ಮಳೆ 6.0 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 1.9 ಮಿ.ಮೀ ಹಾಗೂ ವಾಸ್ತವ ಮಳೆ 4.4 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 3.8 ಮಿ.ಮೀ ಹಾಗೂ ವಾಸ್ತವ ಮಳೆ 10.8 ಮಿ.ಮೀ, ಜಗಳೂರು ವಾಡಿಕೆ ಮಳೆ 2.3 ಮಿ.ಮೀ ಹಾಗೂ ವಾಸ್ತವ ಮಳೆ 12.7 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 5.7 ಮಿ.ಮೀ ಹಾಗೂ ವಾಸ್ತವ ಮಳೆ 20.4 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 9 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 2.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಪೂರ್ಣ ಹಾನಿಯಾಗಿದ್ದು ರೂ. 0.2 ಸಾವಿರ ಅಂದಾಜು ನಷ್ಟ ಹಾಗೂ 1 ಮನೆ ಭಾಗಶಃ ಹಾನಿಯಾಗಿದ್ದು ರೂ.0.30 ಸಾವಿರ ಅಂದಾಜು ನಷ್ಟ ಸಂಭವಿಸಿದೆ ಹಾಗೂ 1 ಜೀವಹಾನಿಯಾಗಿದ್ದು, ವಾರಸುದಾರರಿಗೆ 5 ಲಕ್ಷ ಪರಿಹಾರ ನೀಡಲಾಗಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 0.13 ಸಾವಿರ ಅಂದಾಜು ನಷ್ಟ ಸಂಭವಿಸಿದೆ.
ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು ರೂ. 0.25 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, ರೂ. 0.40 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, ರೂ. 0.40 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ 11.38ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks