ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜೋರು ಮಳೆಯಿಂದಾಗಿ ಜನ ಆತಂಕದಲ್ಲಿದ್ದಾರೆ. ಕೆಲವೊಂದು ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಬರುವುದಕ್ಕೂ ಕಷ್ಟವಾಗುತ್ತಿದೆ. ಹಳೆಯ ಮನೆಗಳಲ್ಲಿ ವಾಸ ಮಾಡುತ್ತಿರುವವರು ಮನೆ ಕುಸಿತದ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಇನ್ನು 9 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 9 ಜಿಲ್ಲೆಗಳಿಗೆ ಪ್ರವಾದ ಭೀತಿ ಎದುರಾಗಿದೆ. ರೆಡ್ ಅಲರ್ಟ್ ಇರುವ ಜಿಲ್ಲೆಗಳ ಜನರಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.
ಮಳೆಯಲ್ಲಿ ಪ್ರಕೃತಿ ಸೌಂದರ್ಯ ದುಪ್ಪಟ್ಟಾಗುತ್ತದೆ. ಈ ಸೌಂದರ್ಯ ನೋಡುವುದಕ್ಕೇನೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಪ್ರವಾಸಕ್ಕೆ ಬರುತ್ತಾರೆ. ಮಳೆ ಹೆಚ್ಚಾಗಿರುವ ಪರಿಣಾಮ ಪ್ರವಾಸಿಗರಿಗೂ ಸೂಚನೆ ನೀಡಲಾಗಿದೆ. ಇನ್ನು ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯ ಪ್ರಭಾವ ಕಡಿಮೆಯಾದ ಮೇಲೆ ಮತ್ತೆ ಶಾಲೆಗಳು ಪುನರಾರಂಭವಾಗುತ್ತವೆ.