Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರ್ ನವೋದಯ ವಿದ್ಯಾಲಯ: ಅಂತರ ಜಿಲ್ಲಾ ವಿಭಾಗೀಯ ಕ್ರೀಡಾಕೂಟಕ್ಕೆ ಚಾಲನೆ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ27) : ಹಿರಿಯೂರಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯಲ್ಲಿ ಎರಡು ದಿನಗಳ ಕಾಲ ನಡೆಯುವ ನವೋದಯ ವಿದ್ಯಾಲಯ ಸಮಿತಿ ಹೈದರಬಾದ್ ವಲಯದ ಅಂತರ ಜಿಲ್ಲಾ ವಿಭಾಗೀಯ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಅಂತರ ಜಿಲ್ಲಾ ವಿಭಾಗೀಯ ಕ್ರೀಡಾಕೂಟಕ್ಕೆ  ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ, ಹಾವೇರಿ, ಧಾರಾವಾಡ, ದಾವಣಗೆರೆ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ವಿದ್ಯಾಲಯ ಸೇರಿದಂತೆ ಒಟ್ಟು 10 ಜಿಲ್ಲೆಯ ನವೋದಯ ವಿದ್ಯಾಲಯಗಳ 200 ಬಾಲಕರು, 168 ಬಾಲಕಿಯರು  ಮತ್ತು 24 ಜನ ಶಿಕ್ಷಕರು ಮತ್ತು ಶಿಕ್ಷಕಿಯರು ಭಾಗವಹಿಸಿದ್ದರು.

ಈ ಕ್ರೀಡಾಕೂಟದಲ್ಲಿ ಕಬ್ಬಡಿ, ಖೋ-ಖೋ, ಯೋಗ, ಚೆಸ್, ಬ್ಯಾಟ್‍ಮಿಟನ್ ಮತ್ತು ಟೆಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದ್ದು. ಈ ಪಂದ್ಯಾವಳಿಯಲ್ಲಿ ಅಯ್ಕೆಯಾದ ಕ್ರೀಡಾಪಟುಗಳನ್ನು ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಲಾಗುವುದು. ಈ ಮಕ್ಕಳಿಗೆ ಕ್ರೀಡೆಯಲ್ಲಿ ಉತ್ತಮ ಭವಿಷ್ಯ ಲಭಿಸುವುದು.

ಹಿರಿಯೂರಿನ ಪವರ್ ಗ್ರಿಡ್ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ ನಾಯರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯೂರಿನ ಪವರ್ ಗ್ರಿಡ್ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ ನಾಯರ್, ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ, ಗುರು ಹಿರಿಯರಿಗೆ ಗೌರವ, ಶಾರೀರಿಕ ಶಿಕ್ಷಣದ ಮಹತ್ವ ಮತ್ತು ನವೋದಯ ವಿದ್ಯಾಲಯದ ಮಹತ್ವದ ಬಗ್ಗೆ  ಹಿತ ವಚನ ನೀಡಿದರು.

ನವೋದಯ ವಿದ್ಯಾಲಯದ ಮಕ್ಕಳ ಪಥ ಸಂಚಲನ, ಮಕ್ಕಳ ಶಿಸ್ತು, ಮಕ್ಕಳ ವಿವಿಧ ಚಟುವಟಿಕೆಗಳನ್ನು  ಮನತುಂಬಿ  ಹೊಗಳಿದರು.

ಹಿರಿಯೂರಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಚಾರ್ಯ ಡ್ಯಾನಿಯಲ್ ರತನ್ ಕುಮಾರ್ ಅವರ ಪೂರ್ವ ಯೋಜನೆ ಮತ್ತು ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದೊಂದಿಗೆ ವಿಭಾಗೀಯ ಕ್ರೀಡಾಕೂಟವನ್ನು ಸುಗಮವಾಗಿ ಆಯೋಜಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...