Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ವಿರುದ್ಧ ಜೆಡಿಎಸ್ ಟ್ವೀಟ್ ಸಮರ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಹಿನ್ನೆಲೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಜೋರಾಗಿದೆ. ಪದೇ ಪದೇ ಆರ್ ಎಸ್ ಎಸ್ ಸಂಘ ಪರಿವಾರದ ವಿಚಾರವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರುತ್ತಿದ್ದು, ಇದೀಗ ಜೆಡಿಎಸ್ ಬಿಜೆಪಿ ನಾಯಕರಿಗೆ ಸಾಲು ಸಾಲು ಪ್ರಶ್ನೆಗಳ ಮೂಲಕ ಕಿಡಿಕಾರಿದೆ‌.

ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎತ್ತಿದ ಪ್ರಶ್ನೆಗಳಿಗೆ ಉತ್ತರ ನೀಡದೆ, ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ
ಉತ್ತರ ನೀಡುವ ಬದಲು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ. ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಕಿಡಿಕಾರಿದೆ.

ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ.ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಎಂದು ಪರೋಕ್ಷವಾಗಿ
ಬಿಎಸ್ವೈ ವಿರುದ್ದ ಕಿಡಿಕಾರಿದ ಜೆಡಿಎಸ್ ವಾಗ್ದಾಳಿ ನಡೆಸಿದೆ. ಇನ್ನೂ ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ..?ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಟೀಕೆ ಮಾಡಿದೆ‌.

ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ. ನೀವು ಯು.ಪಿ.ಎಸ್.ಸಿ ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ ಯನ್ನು ದುರುಪಯೋಗ ಮಾಡಿಕೊಂಡಿಲ್ಲ.
2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ.

ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಕೆ.ಪಿ.ಎಸ್.ಸಿ ಯನ್ನು ಹಾಳು ಮಾಡಿದ್ದು ಯಾರು?
ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!