Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೇಜೋವಧೆ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕ ಮನವಿ

Facebook
Twitter
Telegram
WhatsApp

ಚಿತ್ರದುರ್ಗ : ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಅಪಪ್ರಚಾರ ಮತ್ತು ತೇಜೋವಧೆ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ನೌಕರರ ಪರವಾಗಿ ಹಲವಾರು ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರಾಷ್ಟ್ರದಲ್ಲಿಯೇ ಮಾದರಿಯಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನೆಯನ್ನು ದುರ್ಬಲಗೊಳಿಸುವ ಉದ್ದೇಶದ ಹುನ್ನಾರ ನಡೆಸಿರುವ ಸಂಘಟನೆಯ ವಿರೋಧಿಗಳಾದ ಸರ್ಕಾರಿ ನೌಕರರಾದ ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು (ವಾಣಿಜ್ಯ ಮತ್ತು ಸಕ್ಕರೆ ಕೈಗಾರಿಕೆ ಇಲಾಖೆ) ಇದರ ಅಧೀನ ಕಾರ್ಯದರ್ಶಿ ಶಾಂತಾರಾಮ, ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು ಇದರ ಶಾಖಾಧಿಕಾರಿ ಗುರುಸ್ವಾಮಿ,  ರಾಯಚೂರು ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಮೆಹಬೂಬ ಭಾಷಾ ಎಂ. ಭೂಮಾಪನ ಇಲಾಖೆ ಬೆಂಗಳೂರು ಇದರ ಸೂಪರವೈಸರ್ ಶಿವರುದ್ರಯ್ಯ ವಿ.ವಿ,  ರಾಮನಗರ ತಾಲ್ಲೂಕು ಅವ್ವೇರಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಿಂಗೇಗೌಡ್ರು ಈ ಐದು ಜನರು ಸೇರಿ ರಾಜ್ಯ, ಜಿಲ್ಲಾ , ತಾಲ್ಲೂಕು ಮತ್ತು ಯೋಜನಾ ಶಾಖೆಯ ಸಂಘಟನೆಗಳ ಹಾಗೂ ರಾಜ್ಯ, ಜಿಲ್ಲಾ, ತಾಲ್ಲೂಕು ಘಟಕಗಳ ಅಧ್ಯಕ್ಷರ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿರುವುದು ಅಲ್ಲದೆ ದೂರಿನ ಪ್ರತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಂಘಟನೆ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿರುತ್ತಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಭ್ಯುದಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಸಂಘಟನೆಯ ರಾಜ್ಯ ಅಧ್ಯಕ್ಷರು ಜಿಲ್ಲಾ ತಾಲ್ಲೂಕು ಮತ್ತು ಯೋಜನಾ ಶಾಖೆಯ ಸಂಘಟನೆಗಳು ಹಾಗೂ ಜಿಲ್ಲಾ ತಾಲ್ಲೂಕು ಘಟಕಗಳ ಅಧ್ಯಕ್ಷಕರುಗಳ ಮತ್ತು ಎಲ್ಲಾ ಹಂತದ ಪದಾಧಿಕಾರಿಗಳ ಮೇಲೆ ಅವ್ಯಸ್ಥಿತ ವ್ಯವಸ್ಥಾಪನೆ ಮಾಡಿ ನಕಲಿ ದಾಖಲೆ ಸೃಷ್ಠಿಸಿ ಸಂಘಕ್ಕೆ ಹಾನಿ ಉಂಟು ಮಾಡಿರುವುದರಿಂದ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಸುಳ್ಳು ದೂರು ನೀಡುವ ಮೂಲಕ ಸಂಘದ ತೇಜೋವಧೆ ಮಾಡುವ ಉದ್ದೇಶದಿಂದ ಕೂಡಿದ ಆಧಾರ ರಹಿತ ಆರೋಪ ಮಾಡಿರುತ್ತಾರೆ. ಇಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಕ್ತ ಶಿಫಾರಸ್ಸು ಮಾಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಎಸ್.ಕೆ. ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಬಾಗೇಶ್ ಉಗ್ರಾಣ, ಕಾರ್ಯಾಧ್ಯಕ್ಷರಾದ ಸಿದ್ದೇಶ್ವರ್, ಎಸ್.ವೀರಣ್ಣ, ಉಪಾಧ್ಯಕ್ಷರಾದ ಶ್ರೀನಿವಾಸ್, ಬಿ.ಆರ್.ತಿಪ್ಪೇಸ್ವಾಮಿ, ಚಂದ್ರನಾಯ್ಕ್, ನಿರ್ದೇಶಕರಾದ ಗಂಗಣ್ಣ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!