ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷ ಸಂಘಟನೆಗಾಗಿ ದೇಶಾದ್ಯಂತ ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದರು. ಆ್ಯಕ್ಟೀವ್ ಆಗಿ, ಎಲ್ಲಿಯೂ ಆಯಾಸವನ್ನು ತೋರಿಸಿಕೊಳ್ಳದೆ, ಜನರೊಟ್ಟಿಗೆ ಬೆರೆತು ತಮ್ಮ ಭಾರತ್ ಜೋಡೋ ಯಾತ್ರೆಯನ್ನು ಸಂಪೂರ್ಣ ಮಾಡಿದ್ದರು. ಇದಾದ ಬಳಿಕ ರಾಹುಲ್ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಂಡಿನೋವಿನಿಂದ ಬಳಲುತ್ತಿದ್ದಾರೆ.
ಜುಲೈ 11ರಂದು ಮಂಡಿ ನೋವಿನ ಚಿಕಿತ್ಸೆಗಾಗಿ ಕೇರಳದ ಕೋಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದರು. ಅಂದಿನಿಂದ ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹಾಗೂ ಸ್ಥಳೀಯರು ರಾಹುಲ್ ಗಾಂಧಿ ಅವರು ಬೇಗ ಗುಣಮುಖರಾಗಲಿ ಎಂದು ಜೊತೆಗೆ ಇದ್ದರು. ಸದ್ಯ ಮಂಡಿನೋವಿನ ಚಿಕಿತ್ಸೆ ಯಶಸ್ವಿಯಾಗಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಸದ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಲೋಕಸಭೆಯಲ್ಲೂ ಬಿಜೆಪಿಯನ್ನು ಮಣಿಸುವ ತಯಾರಿ ಕಾಂಗ್ರೆಸ್ ನಿಂದ ನಡೆಯುತ್ತಿದೆ. ಅದಕ್ಕಾಗಿ ಈಗಲೇ ಸಿದ್ಧತೆಯೂ ನಡೆದಿದೆ. ಲೋಕಸಭಾ ಚುನವಣೆಯಲ್ಲೂ ರಾಹುಲ್ ಗಾಂಧಿ ಎಲ್ಲಾ ರಾಜ್ಯದಲ್ಲೂ ಸಂಚರಿಸಿ, ಪಕ್ಷ ಸಂಘಟನೆ ಮಾಡಲಿದ್ದಾರೆ ಎನ್ನಲಾಗಿದೆ.