Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜನ ಸಾಯುತ್ತಿದ್ದರು ತೆಲಂಗಾಣ ಸಿಎಂ ಮಾತ್ರ ಕ್ಯಾರೆ ಅಂತಿಲ್ಲ.. ಹೈಕೋರ್ಟ್ ಗೂ ಲೆಕ್ಕ ನೀಡಿಲ್ಲ..!

---Advertisement---

ಹೈದರಾಬಾದ್: ದೇಶದೆಲ್ಲೆಡೆ ಮಳೆಯ ಆರ್ಭಟ ಎಷ್ಟಿದೆ ಅಂದ್ರೆ ಸಾವು – ನೋವುಗಳ ಸಂಖ್ಯೆಯೇ ಹೆಚ್ಚಾಗಿದೆ. ಮನೆಗಳು ಕುಸಿದಿವೆ, ರಸ್ತೆಗಳ ಸಂಪರ್ಕ ಕಳೆದುಕೊಂಡಿವೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಅದರಲ್ಲೂ ತೆಲಂಗಾಣದ ಜೋರು ಮಳೆಗೆ ಪ್ರವಾಹವೇ ಸೃಷ್ಟಿಯಾಗಿದೆ. ಜನರ ಬದುಕು ಸಂಕಷ್ಟಕ್ಕೆ‌ ಸಿಲುಕಿದೆ.

ತೆಲಂಗಾಣದಲ್ಲಿ ಸೃಷ್ಟಿಯಾಗಿರುವ ಭೀಕರ ಪ್ರವಾಹಕ್ಕೆ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. 17 ಮಂದಿ ಬಲಿಯಾಗಿದ್ದಾರೆ. ಅಷ್ಟೇ ಅಲ್ಲ 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಹಲವರ ದೇಹಗಳು ಸಿಕ್ಕಿಲ್ಲವಾದ್ದರಿಂದ ಅಧಿಕೃತವಾಗಿ ಏನನ್ನು ಹೇಳಲು ಸಾಧ್ಯವಾಗಿಲ್ಲ.

ತೆಲಂಗಾಣದಲ್ಲಿ ಇಷ್ಟು ದೊಡ್ಡ ಮಟ್ಟದ ಅವಾಂತರ ಸೃಷ್ಟಿಯಾಗಿದ್ದರು, ಸಿಎಂ ಕೆಸಿ ಚಂದ್ರಶೇಖರ್ ಮಾತ್ರ ಯಾವುದೇ ರೀತಿಯ ಕಾಳಜಿ ತೋರಿದಂತೆ ಕಾಣುತ್ತಿಲ್ಲ. ಮನೆಯಿಂದ ಹೊರಗಡೆಯೇ ಬರ್ತಿಲ್ಲ ಎಂದು ಜನ ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲ ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ಕೂಡ ಸಲ್ಲಿಕೆಯಾಗಿತ್ತು. ಇದಕ್ಕೆ ಕೆಸಿಆರ್ ಪುತ್ರ ಉತ್ತರಿಸಿದ್ದು, ಸದ್ಯದಲ್ಲೆ ಸಾವು ನೋವಿನ ಲೆಕ್ಕಚಾರ ಕೊಡುವುದಾಗಿ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...