ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸತೀಶ್ ಜಾರಕಿಹೊಳಿ..? ಹೈಕಮಾಂಡ್ ಗೆ ಹೇಳಿರೋದೇನು..?

 

ಸತೀಶ್ ಜಾರಕಿಹೊಳಿ ಸದ್ಯ ಸಿದ್ದರಾಮಯ್ಯ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿಯೂ ಇದ್ದಾರೆ. ಈಗ ಕೆಪಿಸಿಸಿ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಹೈಕಮಾಂಡ್ ಗೆ ಕೂಡ ಮನವಿ ಮಾಡಿದ್ದಾರೆ.

ಆಗಸ್ಟ್ 2ರಂದು ಹೈಕಮಾಂಡ್ ಮಹತ್ವದ ಸಭೆ ಕರೆದಿದೆ. ಆ ಸಭೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದಿಂದ ಒಟ್ಟು 37 ಮಂದಿಗೆ ಆಹ್ವಾನ ನೀಡಲಾಗಿದೆ.

ಲೋಕಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆ ಪಕ್ಷ ಸಂಘಟನೆಯ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದೆ. ಈ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರೆ. ನಾವು ಸಚಿವರಾಗಿರುವ ಕಾರಣ ಪಕ್ಷ ಸಂಘಟನೆಗೆ ಒತ್ತು ನೀಡಲು ಆಗುತ್ತಿಲ್ಲ. ಬೇರೆಯವರಿಗೆ ಕಾರ್ಯಾಧ್ಯಕ್ಷ ಹುದ್ದೆ ಕೊಡುವಂತೆ ಹೇಳಿದ್ದೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!