ಶಿವಮೊಗ್ಗ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಸಂಸದ ಬಿವೈ ರಾಘವೇಂದ್ರ ಹೇಳಿದ್ದೇನು..?

1 Min Read

 

ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಆರಂಭಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ, ಸಂಸದ ಬಿವೈ ರಾಘವೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭದ್ರಾವತಿ ಜನರಿಗೆ ಖುಷಿ ಸುದ್ದಿಯನ್ನು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿವೈ ರಾಘವೇಂದ್ರ ಅವರು, ಭದ್ರಾವತಿಗೆ ಮತ್ತೆ ವೈಭವ! ಐಕಾನಿಕ್ #VISL ಮತ್ತೆ ಜೀವಕ್ಕೆ ಬರಲಿದೆ. VISL ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು SAIL ನಿರ್ವಹಣೆಯು ಅಂತಿಮವಾಗಿ ಒಪ್ಪಿಕೊಂಡಿದೆ ಎಂದು ಘೋಷಿಸಲು ನನಗೆ ಅತೀವ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿ, ಕೇಂದ್ರ ಸಚಿವರಿಗೆ ಟ್ಯಾಗ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಬರೋಬ್ಬರಿ 34 ವರ್ಷಗಳ ಹಿಂದೆ ಅಂದರೆ 1989ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಐಎಸ್‌ಎಲ್‌ ಕಾರ್ಖಾನೆಯನ್ನು ಒಪ್ಪಿಸಿತ್ತು. ನಷ್ಟದಲ್ಲಿದ್ದ ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚಲು ಕೇಂದ್ರ ಸರ್ಕಾರ ಹೊರಟಿತ್ತು. ಕೊನೆಗೂ ಭದ್ರಾವತಿ ಜನರ ನಿರಂತರ ಹೋರಾಟದ ಫಲವಾಗಿ ಇಂದು ಮತ್ತೆ ಆರಂಭಗೊಳ್ಳುವ ಹಂತಕ್ಕೆ ತಲುಪಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಭದ್ರಾವತಿಯ ಮಂದಿ ಸಂತಸಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *