ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಇತ್ತಿಚೆಗೆ ವಿದೇಶಿ ಪ್ರವಾಸಕ್ಕೆ ಪ್ರಯಾಣ ಬೆಳೆಸಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಯೂರೋಪ್ ಗೆ ಹೋಗಿದ್ದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ದುಬೈಗೆ ಪ್ರವಾಸಕ್ಕೆ ಹೋಗಿದ್ದರು. ಈಗ ಇಬ್ಬರು ವಾಪಾಸ್ ಆಗಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರು ಇಂದು ಏರ್ಪೋರ್ಟ್ ಗೆ ಬಂದಿಳಿದಿದ್ದಾರೆ. ಇದೇ ವೇಳೆ ದೆಹಲಿಗೆ ಹೋಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಏರ್ಪೋರ್ಟ್ ನಲ್ಲಿ ಇಳಿದಿದ್ದಾರೆ. ಹೀಗಾಗಿ ಇಬ್ಬರು ಮುಖಾಮುಖಿಯಾಗಿದ್ದಾರೆ.

ರಾಜಕಾರಣಿಗಳಿಗೆ ರಾಜಕೀಯವೇ ಬೇರೆ, ಸಂಬಂಧಗಳೇ ಬೇರೆ ಅನ್ನೋದು ಆಗಾಗ ಅವರು ಹೇಳುತ್ತಿರುತ್ತಾರೆ, ಅದರಂತೆಯೇ ನಡೆದುಕೊಳ್ಳುತ್ತಿರುತ್ತಾರೆ. ಇದೀಗ ಅದನ್ನು ಮತ್ತೆ ಪ್ರೂವ್ ಮಾಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಕ್ಕ ಹಿರಿಯ ನಾಯಕನನ್ನು ಕಂಡು ಡಿಕೆ ಶಿವಕುಮಾರ್ ಮಾತನಾಡಿಸಿದ್ದಾರೆ. ಉಭಯ ನಾಯಕರು ಕುಶಲೋಪರಿ ವಿಚಾರಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















