ಚಿತ್ರದುರ್ಗ (ಆ.04) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನ” ಮೂಲಕ ರಾಜ್ಯದೆಲ್ಲೆಡೆ ಜಾಗೃತಿ ಮೂಡಿಸುತ್ತಿದ್ದು, ವಾಹನವು ಆ. 05 ರಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನ” ಮೂಲಕ ಎಲ್ಲ ಜಿಲ್ಲೆಗಳಲ್ಲೂ ಎಲ್‍ಇಡಿ ಪರದೆಯುಳ್ಳ ಪ್ರಚಾರ ಆಂದೋಲನ ವಾಹನ ಮೂಲಕ ಮುಕ್ತ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮಗಳು, ಕೋರ್ಸ್‍ಗಳು, ಅಧ್ಯಯನ ವಿಷಯಗಳು, ಶುಲ್ಕ ರಿಯಾಯಿತಿ, ಉಚಿತ ಪ್ರವೇಶಾತಿ ಬಗ್ಗೆ ಹಾಗೂ ಇನ್ನಿತರ ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
ಈ ಪ್ರಚಾರ ಆಂದೋಲನ ವಾಹನವು ಆ. 05 ರಂದು ಬೆಳಿಗ್ಗೆ 08 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದು, ಜಿಲ್ಲೆಯಲ್ಲಿನ ಪ್ರಚಾರ ಕಾರ್ಯಕ್ಕೆ ಡಾನ್ ಬೋಸ್ಕೋ ಪದವಿ ಕಾಲೇಜು ಪ್ರಾಂಶುಪಾಲ ಡಾ. ಜೋಮನ್ ಕೆ.ಜೆ. ಹಾಗೂ ಡಾನ್ ಬೋಸ್ಕೋ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಫಾದರ್ ಸಜ್ಜಿ ಜಾರ್ಜ್ ಅವರಿಂದ ಚಾಲನೆ ದೊರೆಯಲಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಚಿತ್ರದುರ್ಗ ಪ್ರಾದೇಶಿಕ ಕೇಂದ್ರವು ಈಗಾಗಲೆ ಚಿತ್ರದುರ್ಗದ ಡಾನ್ ಬೋಸ್ಕೋ ಪದವಿ ಕಾಲೇಜು ಆವರಣದಲ್ಲಿ ಆರಂಭಗೊಂಡಿದ್ದು, ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು- 7406612788 ಅಥವಾ 8722669855 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.