ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ ಆ. 12 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರ ಮನೆ ಮನೆಗಳ ಮೇಲೆ ಭಾರತದ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮನವಿ ಮಾಡಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ಇದೇ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಉದ್ಯಮಗಳು, ಸಾರ್ವಜನಿಕ ಸ್ಥಳಗಳು, ಸಂಘ ಸಂಸ್ಥೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವುದು ಸೇರಿದಂತೆ ಸಾರ್ವಜನಿಕರೂ ಸಹ ಸ್ವಯಂ ಪ್ರೇರಿತವಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು.
ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನ ಎಲ್ಲರ ಮನೆ ಮನೆಗಳ ಮೇಲೆ, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸಾರ್ವಜನಿಕ ಸ್ಥಳಗಳಲ್ಲಿ ಧ್ವಜ ಶಿಷ್ಟಾಚಾರವನ್ನು ಚಾಚು ತಪ್ಪದೆ ಪಾಲನೆ ಮಾಡಿ, ಬೆಳಿಗ್ಗೆ 06 ರಿಂದ ಸಂಜೆ 06 ಗಂಟೆಯವರೆಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ತಿಳಿಸಿದ್ದಾರೆ.